ತಾಲ್ಲೂಕು ಕಸಾಪದಿಂದ ಕನ್ನಡ ಸಾಹಿತ್ಯ ಪರಿಷತ್‌ನ ಸಂಸ್ಥಾಪನಾ ದಿನ

ತಾಲ್ಲೂಕು ಕಸಾಪದಿಂದ ಕನ್ನಡ ಸಾಹಿತ್ಯ ಪರಿಷತ್‌ನ ಸಂಸ್ಥಾಪನಾ ದಿನ

ದಾವಣಗೆರೆ, ಮೇ 6- ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಗರದ ಕೆ.ಎಸ್. ಶಿಕ್ಷಣ ಮಹಾವಿದ್ಯಾಲಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ವಿಶೇಷ ಉಪನ್ಯಾಸ, ಗೌರವ ಸನ್ಮಾನ ಹಾಗೂ ಕನ್ನಡ ಗೀತೆಗಳ ಗಾಯನ ಕಾರ್ಯಕ್ರಮವನ್ನು ನಡೆಸಲಾಯಿತು.

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‌ನ ನಿರ್ದೇಶಕರಾದ ಶ್ರೀಮತಿ ಎ.ಎಲ್. ನಾಗವೇಣಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕೆ.ಎಸ್.ಎಸ್. ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಬಿ.ಎಸ್. ಚನ್ನಬಸಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಂಶೋಧನಾ ಮಾರ್ಗದರ್ಶಕರು ಹಾಗೂ ವಿಶ್ರಾಂತ ಪ್ರಾಧ್ಯಾಪಕರೂ ಆದ ಡಾ. ಎಸ್. ಶಿವಯ್ಯ ಅವರು ಕನ್ನಡ ನಾಡಿನ ಸಂಪತ್ತು ಕನ್ನಡ ಸಾಹಿತ್ಯ ಪರಿಷತ್‌ ನಡೆದು ಬಂದ ದಾರಿಯ ಕುರಿತು ವಿಶೇಷ ಉಪನ್ಯಾಸ ನೀಡಿದರು.

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷರಾದ ಶ್ರೀಮತಿ ಸುಮತಿ ಜಯಪ್ಪ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‌ ಪದಾಧಿಕಾರಿಗಳಾದ ಷಡಾಕ್ಷರಪ್ಪ, ಮಮತಾ ಹಿರೇಮಠ, ಕೆ.ಎಸ್.ಎಸ್. ಶಿಕ್ಷಣ ಮಹಾವಿದ್ಯಾಲಯದ ಹಿರಿಯ ಪ್ರಾಧ್ಯಾಪಕ ಡಾ. ರುದ್ರಮುನಿ ಹಿರೇಮಠ್ ಉಪಸ್ಥಿತರಿದ್ದರು.  ಡಾ. ರುದ್ರಮುನಿ ಹಿರೇಮಠ ತಾವು ಸಂಗ್ರಹಿಸಿರುವ ಪುರಾತನ ತಾಳೆಗರಿ ಸಾಹಿತ್ಯದ ಆಕರಗಳನ್ನು ಪ್ರದರ್ಶಿಸಿದ್ದು ಎಲ್ಲರ ಗಮನ ಸೆಳೆಯಿತು.

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿರ್ದೇಶಕ ಶಿವಕು ಮಾರ್ ಪ್ರಾಸ್ತಾವಿಕ ನುಡಿಗಳ ನ್ನಾಡಿ ದರು. ಆಕಾಶವಾಣಿ ಮತ್ತು ದೂರದರ್ಶನ ಕಲಾವಿದ ಅಜಯ್ ನಾರಾಯಣ್ ಅವರು  ಸುಮಧುರ ಕನ್ನಡ ಗೀತೆ ಗಾಯನ ಮಾಡಿದರು. 

ಕೆ.ಎಸ್‌.ಎಸ್. ಶಿಕ್ಷಣ ಮಹಾವಿದ್ಯಾ ಲಯದ ಪ್ರಥಮ ಹಾಗೂ ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿಗಳು ಕನ್ನಡ ಗೀತೆಗಳನ್ನು ಹಾಡಿದರು. ಯಶಸ್ವಿನಿ, ಶಿಲ್ಪ, ಚೈತ್ರ, ಐಶ್ವರ್ಯ ಪ್ರಾರ್ಥಿಸಿದರು. ಸಹನ ಸ್ವಾಗತಿಸಿದ್ದು ಸಿದ್ದೇಶ್ ಮತ್ತು ಚಂದನ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು.

error: Content is protected !!