ಕಾಂಗ್ರೆಸ್ ಕಾರ್ಯಕರ್ತರು ಯಾರೂ ಧೈರ್ಯ ಕಳೆದು ಕೊಳ್ಳಬಾರದು

ಕಾಂಗ್ರೆಸ್ ಕಾರ್ಯಕರ್ತರು ಯಾರೂ ಧೈರ್ಯ ಕಳೆದು ಕೊಳ್ಳಬಾರದು

ಹರಪನಹಳ್ಳಿ ಕಾಂಗ್ರೆಸ್ ಅಭ್ಯರ್ಥಿ ಎನ್. ಕೊಟ್ರೇಶ್  

ಹರಪನಹಳ್ಳಿ, ಮೇ 14- ತಾಲ್ಲೂಕಿನ ಮತದಾರರು ನನಗೆ ಮೂರು ಬಾರಿ ಮತ ಹಾಕಿದ್ದೀರಿ. ಈ ಬಾರಿ ಗೆಲ್ಲಿಸುತ್ತಾರೆ ಎಂಬ ವಿಶ್ವಾಸ ನನಗಿತ್ತು, ಆದರೆ ಮತದಾರರ ತೀರ್ಪಿಗೆ ನಾನು ತಲೆ ಬಾಗುತ್ತೇನೆ. ಕಾಂಗ್ರೆಸ್ ಕಾರ್ಯಕರ್ತರು ಯಾರು ಧೈರ್ಯ ಕಳೆದು ಕೊಳ್ಳಬಾರದು ಎಂದು ಕಾಂಗ್ರೆಸ್‌ನ ಪರಾಜಿತ ಅಭ್ಯರ್ಥಿ ಅರಸೀಕೆರೆ ಎನ್. ಕೊಟ್ರೇಶ್  ಹೇಳಿದರು.

ಪಟ್ಟಣದ ಕಾಂಗ್ರೆಸ್ ಕಛೇರಿಯಲ್ಲಿ ಇಂದು ನಡೆದ ಕಾರ್ಯಕರ್ತರ ಆತ್ಮಾವಲೋಕನ ಸಭೆಯಲ್ಲಿ  ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ನಿರಂತರ ಪಕ್ಷ ಸಂಘಟನೆಗಾಗಿ ಶ್ರಮಿಸಿದ್ದರು. ಸೋಲಿಗೆ ಕಾರಣ ಗೊತ್ತಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಮುಂದಿನ ದಿನಗಳಲ್ಲಿ ತಾಲ್ಲೂಕಿನಲ್ಲೇ ಇದ್ದುಕೊಂಡು ಕಾಂಗ್ರೆಸ್ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸುತ್ತೇನೆ. ಮುಂಬ ರುವ ತಾಲ್ಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ ಚುನಾವಣೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಾಗಿ ಇಂದಿ ನಿಂದಲೇ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸುವಂತಹ ಕೆಲಸ ಮಾಡೋಣ ಎಂದು ಕಾರ್ಯಕರ್ತರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಲೂರು ಅಂಜಿನಪ್ಪ, ಚಿಗಟೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಪ್ರೇಮ್‌ ಕುಮಾರ್, ಮುಖಂಡರಾದ ಆಲದಹಳ್ಳಿ ಷಣ್ಮುಖಪ್ಪ,  ಶಶಿಧರ್ ಪೂಜಾರ್, ಪ್ರಕಾಶ್ ಪಾಟೀಲ್, ಎಂ. ಅಜ್ಜಣ್ಣ, ಬಿ. ಗೋಣಿಬಸಪ್ಪ, ಹಿರೇಮೇಗಳಗೇರಿ ಪರಶು ರಾಮಪ್ಪ, ಹಲಗೇರಿ ಮಂಜಪ್ಪ, ಹಾಲನಗೌಡ, ಪುರಸಭೆ ಸದಸ್ಯ ಜಾಕೀರ್ ಹುಸೇನ್, ಬಸವರಾಜ್, ಸಿದ್ದಿಕ್, ಹನುಮಂತಪ್ಪ, ತಾವರನಾಯ್ಕ, ಮಹಾಂತೇಶ್ ನಾಯ್ಕ ಸೇರಿದಂತೆ ಇತರರು ಇದ್ದರು.

error: Content is protected !!