ಎಸ್ಸೆಸ್ಸೆಂಗೆ ಕ್ಯಾಬಿನೆಟ್ ದರ್ಜೆ ಸ್ಥಾನಕ್ಕೆ ಒತ್ತಾಯಿಸಿ ಪ್ರತಿಭಟನೆ

ಎಸ್ಸೆಸ್ಸೆಂಗೆ ಕ್ಯಾಬಿನೆಟ್ ದರ್ಜೆ ಸ್ಥಾನಕ್ಕೆ ಒತ್ತಾಯಿಸಿ ಪ್ರತಿಭಟನೆ

ದಾವಣಗೆರೆ, ಮೇ 25-  ಉತ್ತರ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಎಸ್. ಎಸ್. ಮಲ್ಲಿಕಾರ್ಜುನ್ ಅವರಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಸಂಪುಟ ದರ್ಜೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿ ನಗರದ ಅರಳಿಮರ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಪಾಲಿಕೆ ಸದಸ್ಯ ಅಹ್ಮದ್ ಕಬೀರ್ ಖಾನ್ ಮಾತನಾಡಿ, ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಇಂಧನ ಅಥವಾ ಗೃಹ ಖಾತೆ ನೀಡಬೇಕು ಎಂದು ಪಕ್ಷದ ಹೈಕಮಾಂಡ್ ಗೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಫಾರೂಕ್, ಅಬ್ದುಲ್ ಗನಿ, ಶರ್ಪುಲ್ ಬಿಲಾಲ್, ಲಿಯಾಖತ್, ಬಾಷಾ, ಜಬೀ, ಆಫ್ರಿದಿ, ಇಮ್ತಿಯಾಜ್, ಫರಿದಾ ಖಾನ್, ಜಾಫರ್, ಖಾಜಾ, ಜಮಾಲುದ್ದೀನ್ ಸೇರಿದಂತೆ ಅನೇಕ ಕಾರ್ಯಕರ್ತರು, ಮುಖಂಡರು ಪಾಲ್ಗೊಂಡಿದ್ದರು.