ಹರಿಹರ, ಜೂ. 1 – ದುಶ್ಚಟಗಳು ಯುವ ಸಮುದಾಯಕ್ಕೆ ದೊಡ್ಡ ಶತ್ರುವಾಗಿವೆ. ದೇಶದಲ್ಲಿ ಶೇ.60ರಷ್ಟು ಯುವಜನರು ಇರುವ ಕಾರಣ, ಈ ಬಗ್ಗೆ ಹೆಚ್ಚು ಎಚ್ಚರಿಕೆ ವಹಿಸಬೇಕಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಾವಣಗೆರೆ ಜಿಲ್ಲೆಯ ಹಿರಿಯ ನಿರ್ದೇಶಕ ವಿ. ವಿಜಯಕುಮಾರ್ ನಾಗನಾಳ ಹೇಳಿದರು.
ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿ ವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಹರಿಹರ ಹಾಗೂ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ವತಿಯಿಂದ ವಿದ್ಯಾರ್ಥಿಗಳಿಗೆ ಕಾಲೇ ಜಿನ ಸಭಾಂಗಣದಲ್ಲಿ ವಿಶ್ವ ತಂಬಾಕು ವಿರೋಧಿ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಉಪನ್ಯಾಸಕಿ ಶ್ವೇತಾ ಈಶ್ವರ್ ಮಾತನಾಡಿ, ಸಹವಾಸ ದೋಷದಿಂದ, ಕುತೂಹಲಕ್ಕಾಗಿ ಆರಂಭವಾಗುವ ದುಶ್ಚಟಗಳು, ಬೆಳೆಯುವ ಮಕ್ಕಳ ಬದುಕನ್ನು ನಾಶ ಮಾಡಿ ಬಿಡುತ್ತವೆ ಎಂದರು.
ಜಿಲ್ಲಾ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷರಾದ ರಾಜಶೇಖರ ಕೊಂಡಜ್ಜಿ ಹಾಗೂ ಜಿಲ್ಲಾ ಜನ ಜಾಗೃತಿ ವೇದಿಕೆ ಸದಸ್ಯರಾದ ಹೊನ್ನಾಳಿ ಬಾಬಣ್ಣ ಮಾತನಾಡಿದರು.
ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲ ಲಕ್ಷಣ ನಾಯ್ಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರುಗಳಾದ ಗಣೇಶ ಮತ್ತು ಹರೀಶ ಅವರು ಉಪಸ್ಥಿತರಿದ್ದರು. ತಾಲ್ಲೂಕಿನ ಯೋಜನಾಧಿಕಾರಿ ಗಣಪತಿ ಮಾಳಂಜಿಯವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ಚರಣ್ ರಾಜ್ ನಿರೂಪಿಸಿದರು.