ಲಯನ್ಸ್ ಹಿರಿಯ ಪ್ರಾಥಮಿಕ ಶಾಲೆ ಪ್ರಾರಂಭ

ಲಯನ್ಸ್ ಹಿರಿಯ ಪ್ರಾಥಮಿಕ ಶಾಲೆ ಪ್ರಾರಂಭ

ಮಲೇಬೆನ್ನೂರು ಜೂ. 1 – ಇಲ್ಲಿನ ಲಯನ್ಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2023-24 ನೇ ಸಾಲಿನ ಶಾಲಾ ಪ್ರಾರಂಭೋತ್ಸವದ ವೇಳೆ ವಿದ್ಯಾರ್ಥಿಗಳಿಗೆ ಗುಲಾಬಿ ಹೂ ನೀಡಿ ಸ್ವಾಗತ ಕೋರಲಾಯಿತು. ಈ ವೇಳೆ ವಿದ್ಯಾರ್ಥಿಗಳಿಗೆ ಸರ್ಕಾರ ಕೊಡಮಾಡುವ ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು. ಲಯನ್ಸ್ ಕ್ಲಬ್ ಅಧ್ಯಕ್ಷ ಎನ್. ಜಿ. ಶಿವಾಜಿ ಪಾಟೀಲ್, ಲಯನ್ಸ್ ವಿದ್ಯಾಸಂಸ್ಥೆ ಅಧ್ಯಕ್ಷ ಬಿ. ಚಿದಾನಂದಪ್ಪ, ಓ. ಜಿ. ರುದ್ರಗೌಡ್ರು, ಹೆಚ್ . ಜಿ. ಚಂದ್ರಶೇಖರ್, ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ್ ಸೇರಿದಂತೆ ಸಹ ಶಿಕ್ಷಕರು ಈ ಸಂದರ್ಭದಲ್ಲಿ ಹಾಜರಿದ್ದರು.

error: Content is protected !!