ದಾವಣಗೆರೆ, ಜೂ. 1 – ಸಂಸದರು, ಹಿಂದಿನ ಜಿಲ್ಲಾ ಸಚಿವರು ಮತ್ತು ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ಮುಚ್ಚಿ ಹಾಕುವ ಉದ್ದೇಶದಿಂದ ತರಾತುರಿಯಲ್ಲಿ ದೇವರಾಜ ಅರಸು ಬಡಾವಣೆಯ ಈಜುಕೊಳವನ್ನು ಉದ್ಘಾಟಿಸಲಾಗಿದೆ ಎಂದು ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ ಆರೋಪಿಸಿದ್ದಾರೆ.
ಈಜುಕೊಳವನ್ನು ನಿನ್ನೆ ವೀಕ್ಷಿಸಿದ ಅವರು, ಇನ್ನು ಕಾಮಗಾರಿ ಪೂರ್ಣಗೊಂಡಿಲ್ಲ. ಕೆಲವು ಕಡೆ ಕಳಪೆ ಕಾಮಗಾರಿ ಆಗಿದ್ದರೂ ಸಹ ಏಕಾಏಕಿ ಉದ್ಘಾಟನೆ ಮಾಡಿರುವುದು ಏಕೆ ? ಎಂದು ಪ್ರಶ್ನಿಸಿದರು. ಇದರಿಂದ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ. ಇದಕ್ಕೆ ಸಂಸದರು, ಸಚಿವರೇ ಕಾರಣ ಎಂದು ಆರೋಪಿಸಿದ ಅವರು, ಬಾಲಕರು ಸಾವನ್ನಪ್ಪಿದ್ದರೂ ಸಹ ಆ ಕುಟುಂಬಗಳಿಗೆ ಸೌಜನ್ಯಕ್ಕಾದರೂ ಸಾಂತ್ವನ ಹೇಳುವ ಕೆಲಸ ಸಂಸದರಿಂದ ಆಗಿಲ್ಲ ಎಂದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯ ಎ.ನಾಗರಾಜ್, ಕ್ರೀಡಾಪಟುಗಳು ಉಪಸ್ಥಿತರಿದ್ದರು.