ಹರಿಹರ : ನಗರಸಭಾ ಅಧ್ಯಕ್ಷ ಸ್ಥಾನಕ್ಕೆ ಶಾಹೀನಾಬಾನು ರಾಜೀನಾಮೆ

ಹರಿಹರ : ನಗರಸಭಾ ಅಧ್ಯಕ್ಷ ಸ್ಥಾನಕ್ಕೆ ಶಾಹೀನಾಬಾನು ರಾಜೀನಾಮೆ

ಹರಿಹರ, ಜೂ. 5 – ನಗರದ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಶಾಹೀನಾಬಾನು ದಾದಾಪೀರ್ ರಾಜೀನಾಮೆ ನೀಡಿದ್ದಾರೆ.

ನಗರಸಭೆ ಅಧ್ಯಕ್ಷೆ ಶಾಹೀನಾಬಾನು ದಾದಾಪೀರ್ ಭಾನುವಳ್ಳಿ ಅವರು ಜಿಲ್ಲಾಧಿಕಾರಿ ಕಚೇರಿಗೆ ಮಾಜಿ ಶಾಸಕ ಎಸ್. ರಾಮಪ್ಪ ಅವರ ನೇತೃತ್ವದಲ್ಲಿ ಸದಸ್ಯರ ನಿಯೋಗದ ಮೂಲಕ ತೆರಳಿ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರಿಗೆ ರಾಜೀನಾಮೆ ಪತ್ರವನ್ನು ನೀಡಿದ್ದಾರೆ.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಬಿ. ರೇವಣಸಿದ್ದಪ್ಪ, ನಂದಿಗಾವಿ ಶ್ರೀನಿವಾಸ್, ನಗರಸಭೆ ಸದಸ್ಯರಾದ ಕೆ.ಜಿ. ಸಿದ್ದೇಶ್, ಎಸ್.ಎಂ. ವಸಂತ್, ಆರ್.ಸಿ. ಜಾವೇದ್, ಪಿ.ಎನ್. ವಿರುಪಾಕ್ಷಪ್ಪ ಇತರರು ಹಾಜರಿದ್ದರು.

error: Content is protected !!