ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪನೆಗೆ ಸಿಎಂಗೆ ಮನವಿ

ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ  ನಿಧಿ ಸ್ಥಾಪನೆಗೆ ಸಿಎಂಗೆ ಮನವಿ

ದಾವಣಗೆರೆ, ಜೂ. 5- ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪನೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಸಲಹೆಗಾರ, ಹಿರಿಯ ಪತ್ರಿಕಾ ವಿತರಕ ಕೃಷ್ಣಮೂರ್ತಿ ಅವರು ಇಂದು ನಗರಕ್ಕಾ ಗಮಿಸಿದ್ದ ಮುಖ್ಯಮಂತ್ರಿ ಸಿದ್ಧ ರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು. ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ ಅವರು ಪತ್ರಿಕಾ ವಿತರಕರ ಬೇಡಿಕೆ ಈಡೇರಿಸುವ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

error: Content is protected !!