ಎಲ್ಲರಿಗೂ ಆರೋಗ್ಯ, ಎಲ್ಲೆಡೆಯೂ ಆರೋಗ್ಯ : ಡಾ. ಗುರುಪ್ರಸಾದ್

ಎಲ್ಲರಿಗೂ ಆರೋಗ್ಯ, ಎಲ್ಲೆಡೆಯೂ ಆರೋಗ್ಯ : ಡಾ. ಗುರುಪ್ರಸಾದ್

ಚಳ್ಳಕೆರೆ, ಜೂ. 6- ಈಚೆಗೆ ಅಸಾಂಕ್ರಾಮಿಕ ರೋಗಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಕನಿಷ್ಟ ವರ್ಷಕ್ಕೆ ಎರಡು ಬಾರಿ ಆರೋಗ್ಯ ತಪಾಸಣೆ ತಪ್ಪದೇ ಮಾಡಿಸಿಕೊಳ್ಳಬೇಕು. ಇದರಿಂದ ತಮ್ಮ ಆರೋಗ್ಯ ವ್ಯತ್ಯಾಸ ಆಗುವುದನ್ನು ತಡೆಗಟ್ಟಬಹುದು. ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಎಲ್ಲರ ಜವಾಬ್ದಾರಿ. ಪ್ರತಿಯೊಬ್ಬರೂ ಆರೋಗ್ಯದ ಕಡೆ ಗಮನ ವಹಿಸಬೇಕು ಎಂದು ಆಡಳಿತ ವೈದ್ಯಾಧಿಕಾರಿ ಡಾ. ಹೆಚ್.ಸಿ. ಗುರುಪ್ರಸಾದ್ ತಿಳಿಸಿದರು.

ಅವರು, ಗ್ರಾಮ ಪಂಚಾಯಿತಿ ಮೀರಾಸಾಬಿಹಳ್ಳಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕಾರ್ಯನಿರ್ವಹಿಸುವ ಕೂಲಿ ಕಾರ್ಮಿಕರಿಗೆ ಗ್ರಾಮ ಪಂಚಾಯತಿ ಆರೋಗ್ಯ ಅಮೃತ ಅಭಿಯಾನದಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಉಪಸ್ಥಿತರಿದ್ದು ಮಾತನಾಡಿದರು.

error: Content is protected !!