ದಾವಣಗೆರೆ, ಜೂ. 9- ಜೈನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಇಂಜಿನಿಯರಿಂಗ್ ವಿಭಾಗದಿಂದ ಕಾಲೇಜಿನ ಆಡಿಟೋರಿಯಂನಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಪ್ರಾಂಶುಪಾಲ ಡಾ. ಡಿ.ಬಿ. ಗಣೇಶ್ ಕಾರ್ಯಕ್ರಮ ಉದ್ಘಾಟಿಸಿದರು. ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ರಾಹುಲ್ ಪಾಟೀಲ್ ಹಾಗೂ ಮುಖ್ಯ ಅತಿಥಿಗಳಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ದಾವಣಗೆರೆ ಪ್ರಾದೇಶಿಕ ಅಧಿಕಾರಿ ಡಾ. ಹೆಚ್. ಲಕ್ಷ್ಮೀಕಾಂತ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಧ್ಯಾಪಕ ಸಂಯೋಜಕ ಪ್ರೊ. ಎನ್. ಗುರುಪ್ರಶಾಂತ್ ಉಪಸ್ಥಿತರಿದ್ದರು.