ತರಳಬಾಳು ಜಗದ್ಗುರುಗಳವರ ಆಶೀರ್ವಾದ ಪಡೆದ ಸಿದ್ದರಾಮಯ್ಯ

ತರಳಬಾಳು ಜಗದ್ಗುರುಗಳವರ ಆಶೀರ್ವಾದ ಪಡೆದ ಸಿದ್ದರಾಮಯ್ಯ

ಬೆಂಗಳೂರು, ಜೂ.9- ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದ ಬಗ್ಗೆ ಸದಾ ಭಕ್ತಿ, ಗೌರವ ಹೊಂದಿರುವ ; ಶ್ರೀ ತರಳಬಾಳು ಜಗದ್ಗುರುಗಳವರ  ಸಾಮಾಜಿಕ, ಧಾರ್ಮಿಕ, ರೈತಮುಖಿ, ನ್ಯಾಯಮುಖಿ, ಶೈಕ್ಷಣಿಕ ಕಾರ್ಯಕ್ರಮಗಳ ಬಗ್ಗೆ ಅತೀವ ಮೆಚ್ಚುಗೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾದ ನಂತರ ಇದೇ ಪ್ರಥಮ ಬಾರಿಗೆ ಶ್ರೀ ತರಳಬಾಳು ಜಗದ್ಗುರು ಶ್ರೀ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರನ್ನು ಬೆಂಗಳೂರಿನ ಆರ್.ಟಿ.ನಗರದಲ್ಲಿರುವ ತರಳಬಾಳು ಧಾರ್ಮಿಕ ಮತ್ತು ಸಾಂಸ್ಕೃತಿಕ ಕೇಂದ್ರದಲ್ಲಿ ಶ್ರೀ ಜಗದ್ಗುರುಗಳವರಿಗೆ ಫಲ, ಪುಷ್ಪಹಾರದೊಂದಿಗೆ ಭಕ್ತಿ ಸಮರ್ಪಿಸಿ ಆಶೀರ್ವಾದ ಪಡೆದರು.

ಸಿದ್ದರಾಮಯ್ಯ ಅವರನ್ನು ಶ್ರೀ ಜಗದ್ಗುರುಗಳವರು ಶಾಲು, ಹಾರ, ಸ್ಮರಣಿಕೆಯೊಂದಿಗೆ ಗೌರವಿಸಿದರು.

ಈ ಸಂದರ್ಭದಲ್ಲಿ ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಚಿವ ಭೈರತಿ ಸುರೇಶ್, ಶಾಸಕರುಗಳಾದ ತಮ್ಮಣ್ಣ, ಶಿವಗಂಗಾ ಬಸವರಾಜು, ಡಿ.ಜಿ.ಶಾಂತನಗೌಡ, ಕೆ.ಎಸ್. ಬಸವಂತಪ್ಪ, ಮಾಜಿ ಶಾಸಕರಾದ ಹೆಚ್.ಎಂ.ರೇವಣ್ಣ, ಮಾಜಿ ಸಂಸದ ಚಂದ್ರಪ್ಪ, ಮಾಜಿ ಸಚಿವ ಹೆಚ್.ಆಂಜನೇಯ, ರಾಜ್ಯ ರೈತ ಸಂಘದ ಅಧ್ಯಕ್ಷ ಹೆಚ್.ಆರ್.ಬಸವರಾಜಪ್ಪ, ಐಪಿಎಸ್ ಅಧಿಕಾರಿ ಯತೀಶ್ ಚಂದ್ರ, ತರಳಬಾಳು ಕೇಂದ್ರದ ಕಾರ್ಯದರ್ಶಿ ಬಾತಿ ವಿಶ್ವನಾಥ್ ಸೇರಿದಂತೆ ಅಪಾರ ಗಣ್ಯರು ಮತ್ತಿತರರು ಹಾಜರಿದ್ದರು.

error: Content is protected !!