ದಾವಣಗೆರೆ, ಜೂ. 11- ಮಾ.ಸ.ಬ ಕಲಾ ಮತ್ತು ವಾಣಿಜ್ಯ ಕಾಲೇಜು, ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ವಿಶ್ವ ಪರಿಸರ ಸಂರಕ್ಷಣಾ ದಿನಾಚರಣೆ ಪ್ರಯುಕ್ತ ಬಾಪೂಜಿ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ವಿಶ್ವ ಪರಿಸರ ಸಂರಕ್ಷಣೆ ಬಗ್ಗೆ ಉಪನ್ಯಾಸ ಕಾರ್ಯ ಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಪರಿಸರ ಮಾಲಿನ್ಯದಿಂದಾಗುವ ಪರಿಣಾಮಗಳ ಬಗ್ಗೆ ಮಾಹಿತಿ ನೀಡಲಾಯಿತು. ಬಾಪೂಜಿ ಹೈಸ್ಕೂಲ್ ಮುಖ್ಯೋಪಾಧ್ಯಾಯ ರವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿಗಳಾದ ಡಾ. ಆರ್. ರಾಘವೇಂದ್ರ, ಡಾ. ಪ್ರವೀಣ್ ಕುಮಾರ್, ಪ್ರೊ.ಎಸ್. ಪರಮೇಶಿ, ಹಾಲೇಶ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
January 12, 2025