ಪ್ರತಿಶಾಲೆಯಲ್ಲೂ ಪರಿಸರದ ಬಗ್ಗೆ ಅರಿವು ಮೂಡಿಸಬೇಕು

ಪ್ರತಿಶಾಲೆಯಲ್ಲೂ ಪರಿಸರದ ಬಗ್ಗೆ ಅರಿವು ಮೂಡಿಸಬೇಕು

ಭಾನುವಳ್ಳಿ ಕಾರ್ಯಕ್ರಮದಲ್ಲಿ ಶಾಸಕ  ಬಿ.ಪಿ. ಹರೀಶ್

ಮಲೇಬೆನ್ನೂರು, ಜೂ.12- ಭಾನುವಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಮ್ಮಿಕೊಂಡಿದ್ದ ಪರಿಸರ ದಿನಾಚರಣೆ ಅಂಗವಾಗಿ ಪರಿಸರದ ಅರಿವು ಹಾಗೂ ಗಿಡನಾಟಿ ಕಾರ್ಯಕ್ರಮವನ್ನು ಶಾಸಕ ಬಿ.ಪಿ.ಹರೀಶ್ ಅವರು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿದರು.

ನಂತರ ಮಾತನಾಡಿದ ಹರೀಶ್ ಅವರು, ಪ್ರತಿ ಶಾಲೆಗಳಲ್ಲಿ ಪರಿಸರದ ಬಗ್ಗೆ ಅರಿವು ಮೂಡಿಸುವ ಇಂತಹ ಕಾರ್ಯಕ್ರಮಗಳನ್ನು ಏರ್ಪಡಿಸಿ, ಮಕ್ಕಳಿಗೆ ಪರಿಸರದ ಮಹತ್ವ ತಿಳಿಸುವ ಕೆಲಸ ಮಾಡಬೇಕೆಂದು ಧರ್ಮಸ್ಥಳ ಯೋಜನೆಯವರಿಗೆ ತಿಳಿಸಿ, ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಶಾಲಾ ವಿದ್ಯಾರ್ಥಿಗಳಿಗೆ ಗಿಡಗಳನ್ನು ವಿತರಿಸಲಾಯಿತು. ಅಲ್ಲದೇ, ಶಾಲೆಯ ಆವರಣದಲ್ಲಿ ಗಿಡ ನಾಟಿ ಮಾಡಲಾಯಿತು.

ಧರ್ಮಸ್ಥಳ ಯೋಜನೆಯ ಜಿಲ್ಲಾ ನಿರ್ದೇಶಕ ವಿಜಕುಮಾರ್ ನಾಗನಾಳ್, ಹರಿಹರ ಯೋಜನಾಧಿಕಾರಿ ಗಣಪತಿ ಮಾಳಂಜಿ ಮಾತನಾಡಿ, ಮಕ್ಕಳು ಪರಿಸರ ಸಂರಕ್ಷಣೆಗೆ ಗಮನ ಹರಿಸಬೇಕೆಂದರು

ಸಾಹಿತಿ ಯು.ಕೆ.ಅಣ್ಣಪ್ಪ ಮಾತನಾಡಿ, ಪ್ರತಿದಿನವೂ ನಾವು ಪರಿಸರದ ಸಂರಕ್ಷಿಸಿಸುವ ಬಗ್ಗೆ ಚಿಂತನೆ ಮಾಡಿ, ಆ ನಿಟ್ಟಿನಲ್ಲಿ ಪರಿಸರ ಬೆಳೆಸುವ ಕೆಲಸ ಮಾಡೋಣ ಎಂದರು.

ಭಾನುವಳ್ಳಿ ಗ್ರಾ.ಪಂ. ಅಧ್ಯಕ್ಷೆ ಮಂಜುಳಾ ವೀರೇಶ್, ತಾ.ಪಂ. ಮಾಜಿ ಅಧ್ಯಕ್ಷ ಹೆಚ್.ಕೆ.ಕನ್ನಪ್ಪ, ಶಾಲಾ ಮುಖ್ಯ ಶಿಕ್ಷಕ ಹನುಮಂತಪ್ಪ ಮಾತನಾಡಿದರು.

ಗ್ರಾ.ಪಂ. ಮಾಜಿ ಸದಸ್ಯ ಹೆಚ್.ಎಸ್.ಕರಿಯಪ್ಪ, ರೈತ ಸಂಘದ ಅಧ್ಯಕ್ಷ ಕೊಟ್ರೇಶಪ್ಪ, ನಿವೃತ್ತ ಶಿಕ್ಷಕ ಸಿದ್ದಪ್ಪ, ಒಕ್ಕೂಟದ ಅಧ್ಯಕ್ಷರಾದ ಮಲ್ಲಿಕಾರ್ಜುನಪ್ಪ, ದಾಕ್ಷಾಯಣಮ್ಮ, ಅನಿತಾ ಹಾಗೂ ಪದಾಧಿಕಾರಿಗಳು ಮತ್ತು ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು,
ಶಾಲಾ ಶಿಕ್ಷಕರು, ವಲಯ ಮೇಲ್ವಿಚಾರಕಿ ಶ್ರೀಮತಿ ಗಂಗಮ್ಮ ಮತ್ತು ಸೇವಾ ಪ್ರತಿನಿಧಿಗಳು ಭಾಗವಹಿಸಿದ್ದರು.

error: Content is protected !!