ಉದ್ಯೋಗ ಮೇಳ: ಕಂಪನಿಗಳಿಗೆ 1361 ವಿದ್ಯಾರ್ಥಿಗಳ ಆಯ್ಕೆ

ಉದ್ಯೋಗ ಮೇಳ: ಕಂಪನಿಗಳಿಗೆ 1361 ವಿದ್ಯಾರ್ಥಿಗಳ ಆಯ್ಕೆ

ದಾವಣಗೆರೆ, ಜೂ. 13- ನಗರದ ಜಿಎಂಎಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತೀಚಿಗೆ ಆಯೋಜಿಸಿದ್ದ ಬೃಹತ್ ಉದ್ಯೋಗ ಮೇಳದಲ್ಲಿ 3864 ಆಕಾಂಕ್ಷಿಗಳು ಹೆಸರು ನೋಂದಾಯಿಸಿಕೊಂಡಿದ್ದರು. ಈ ಪೈಕಿ 1361 ವಿದ್ಯಾರ್ಥಿಗಳು ವಿವಿಧ ಕಂಪನಿಗಳಿಗೆ ಆಯ್ಕೆಯಾಗಿದ್ದಾರೆ.

ಮೇಳದಲ್ಲಿ ಬಹುತೇಕ ವಿದ್ಯಾರ್ಥಿಗಳು ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ಪದವಿ ಪಡೆದವರಾಗಿದ್ದರು ಎಂದು ಉದ್ಯೋಗ ಮತ್ತು ತರಬೇತಿ ಅಧಿಕಾರಿ ತೇಜಸ್ವಿ ಕಟ್ಟಿಮನಿ ತಿಳಿಸಿದ್ದಾರೆ.

ಉದ್ಯೋಗ ಮೇಳಕ್ಕೆ ಚಾಲನೆ ನೀಡಿದ ಶ್ರೀಶೈಲ ಎಜುಕೇಷನಲ್ ಟ್ರಸ್ಟ್ ಖಜಾಂಚಿ ಜಿ.ಎಸ್. ಅನಿತ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಅವಕಾಶ ನೀಡುವುದು ನಮ್ಮ ಗುರಿಯಾಗಿದೆ. ವಿದ್ಯಾರ್ಥಿಗಳ ಕೌಶಲ್ಯಕ್ಕೆ ಅನುಗುಣವಾಗಿ ಉದ್ಯೋಗ ಅವಕಾಶ ನೀಡಬೇಕಾಗಿದೆ ಎಂದರು.

ಕಾಲೇಜಿನ ಪ್ರಾಚಾರ್ಯ ಡಾ. ಸಂಜಯ್ ಪಾಂಡೆ ಮಾತನಾಡಿ, ವಿದ್ಯಾರ್ಥಿಗಳಿಗೆ ಲಭಿಸಿರುವ ಉದ್ಯೋಗದ ಸದುಪಯೋಗ ಪಡೆದುಕೊಂಡು ತಂದೆ-ತಾಯಿ, ಸಂಸ್ಥೆೆಗೆ ಕೀರ್ತಿ ತರಬೇಕೆಂದರು.

ಕಾಲೇಜಿನ ಆಡಳಿತಾಧಿಕಾರಿ ವೈ.ಯು. ಸುಭಾಷ್ ಚಂದ್ರ, ಜಿ.ಎಲ್. ರಾಜೀವ್, ಸಹಾಯಕ ಆಡಳಿತಾಧಿಕಾರಿ ಶಿವಕುಮಾರ್, ಪ್ರಮೋದ್, ಆಕಾಶ್, ಅಭಿಷೇಕ್ ಮತ್ತಿತರರಿದ್ದರು. 

error: Content is protected !!