ಜನವಿರೋಧಿ ಕಾಯ್ದೆಗಳ ರದ್ಧತಿಗೆ ಆಗ್ರಹ

ಜನವಿರೋಧಿ ಕಾಯ್ದೆಗಳ ರದ್ಧತಿಗೆ ಆಗ್ರಹ

ಕರ್ನಾಟಕ ರಾಜ್ಯ ರೈತ ಸಂಘದಿಂದ ನಗರದಲ್ಲಿ ಪ್ರತಿಭಟನೆ, ಎಸಿಗೆ ಮನವಿ

ದಾವಣಗೆರೆ, ಜೂ. 15- ಭೂ ಸುಧಾರಣೆ ತಿದ್ದುಪಡಿ ಕಾಯಿದೆ, ಎಪಿಎಂಸಿ ತಿದ್ದುಪಡಿ ಕಾಯಿದೆ ರದ್ದು ಮಾಡುವುದು ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ರೈತ ಸಂಘದಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಉಪ ವಿಭಾಗಾಧಿಕಾರಿ ಕಚೇರಿ ಮುಂಭಾಗ ಗುರುವಾರ ಪ್ರತಿಭಟನೆ ನಡೆಸಿ, ಉಪವಿಭಾಗಾಧಿಕಾರಿ ಮುಖಾಂತರ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ದಿಲ್ಲಿಯಲ್ಲಿ ನಡೆದ ರೈತರ ಸುದೀರ್ಘ ಹೋರಾಟದಿಂದ ಎಚ್ಚೆತ್ತ ಕೇಂದ್ರ ಸರ್ಕಾರವು, ಮೂರು ಕರಾಳ ಕೃಷಿ ಕಾಯಿದೆಗಳನ್ನು ಹಿಂಪಡೆಯಿತು. ಆದರೆ, ರಾಜ್ಯದಲ್ಲಿ ಅಕಾರ ನಡೆಸುತ್ತಿದ್ದ ಬಿಜೆಪಿ ಸರಕಾರವು ಭೂ ಸುಧಾರಣಾ ತಿದ್ದುಪಡಿ ಕಾಯಿದೆ, ಎಪಿಎಂಸಿ ತಿದ್ದುಪಡಿ ಕಾಯಿದೆ ಹಿಂಪಡೆಯದೆ, ರೈತ ವಿರೋ ನೀತಿ ಅನುಸರಿಸಿತ್ತು. ಆದರೆ, ರಾಜ್ಯದಲ್ಲಿ ನೂತನವಾಗಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಈ ತಿದ್ದುಪಡಿ ಕಾಯಿದೆಗಳನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿ, ಘೋಷಣೆಗಳನ್ನು ಕೂಗಿದರು. ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ರಕ್ಷಣೆ ಕಾಯಿದೆ ಹಿಂಪಡೆಯಬೇಕು. ರೈತರಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಸಬೇಕು ಎಂದು ಪ್ರತಿಭಟನಾನಿರತ ರೈತರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಬುಳ್ಳಾಪುರದ ಹನುಮಂತಪ್ಪ, ಕೊಗ್ಗನೂರು ಹನುಮಂತಪ್ಪ, ಅಣಬೇರು ಅಣ್ಣಪ್ಪ, ಎಸ್.ಟಿ. ಪರಮೇಶ್ವರಪ್ಪ, ಕರೆಲಕ್ಕೇನಹಳ್ಳಿ ಹನುಮಂತಪ್ಪ, ಕಂಪಳಪ್ಪ ಚಟೋಬನಹಳ್ಳಿ, ರುದ್ರಪ್ಪ ಕೊಗ್ಗನೂರು, ಸಿಡ್ಲಪ್ಪ, ದಶರಥರಾಜ್ ಇದ್ದರು.

error: Content is protected !!