ಜೆಜೆಎಂ ಮೆಡಿಕಲ್ ಕಾಲೇಜಿನಲ್ಲಿ ಎಸ್ಸೆಸ್ ಹುಟ್ಟುಹಬ್ಬದ ಸಂಭ್ರಮ

ಜೆಜೆಎಂ ಮೆಡಿಕಲ್ ಕಾಲೇಜಿನಲ್ಲಿ ಎಸ್ಸೆಸ್ ಹುಟ್ಟುಹಬ್ಬದ ಸಂಭ್ರಮ

ದಾವಣಗೆರೆ, ಜೂ. 20- ನಗರದ ಜೆಜೆಎಂ ಮೆಡಿಕಲ್ ಕಾಲೇಜಿನಲ್ಲಿ ಕಾಲೇಜಿನ ಚೇರ್ಮನ್ ಹಾಗೂ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ 93 ನೇ ಜನ್ಮ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲ ಡಾ.ಎಸ್.ಬಿ. ಮುರುಗೇಶ್, ಬಾಪೂಜಿ ವೈದ್ಯಕೀಯ ನಿರ್ದೇಶಕ ಡಾ. ಕುಮಾರ್ ಅವರ ನೇತೃತ್ವದಲ್ಲಿ ಕೇಕ್ ಕತ್ತರಿಸಿ, ರಕ್ತದಾನ ಮಾಡಿದ ರಕ್ತದಾನಿಗಳಿಗೆ ಕೇಕ್ ತಿನ್ನಿಸಿದ ಎಸ್ಸೆಸ್, ರಕ್ತದಾನ ಮಾಡಿದ 93 ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು.

 ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಗೋಪಾಲಕೃಷ್ಣ ಅವರು 75 ನೇ ಬಾರಿ ರಕ್ತದಾನ ಮಾಡಿದ್ದಕ್ಕಾಗಿ ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಸನ್ಮಾನ ಮಾಡಲಾಯಿತು. ಎಸ್ಸೆಸ್ ಜನ್ಮದಿನದ ಅಂಗವಾಗಿ 93 ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

error: Content is protected !!