ದಾವಣಗೆರೆ, ಜೂ. 22- ತಾಲ್ಲೂಕಿನ ಎಲೆಬೇ ತೂರು ಗ್ರಾಮದ ಶ್ರೀ ಕೊಂಡಜ್ಜಿ ಬಸಪ್ಪ ಪ್ರೌಢಶಾಲೆ ಹಾಗೂ ಶ್ರೀ ತರಳಬಾಳು ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಆವರಣದಲ್ಲಿ ಒಂಭತ್ತನೆಯ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶ್ರೀ ತರಳಬಾಳು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಅಧ್ಯಕ್ಷ ಎಚ್. ಬಸವರಾಜಪ್ಪ ಮಾತನಾಡಿ, ಪ್ರತಿನಿತ್ಯ ಶಾಲಾ ಮಕ್ಕಳಿಗೆ ಆಟ-ಪಾಠದ ಜೊತೆಗೆ ಯೋಗ-ಧ್ಯಾನದ ಬಗ್ಗೆ ತಿಳಿಸಿಕೊಡಬೇಕು. ಮನೆಯಲ್ಲಿ ಪ್ರತಿಯೊಬ್ಬರೂ ಸ್ವಲ್ಪ ಹೊತ್ತು ಯೋಗ-ಧ್ಯಾನ ಮಾಡುವುದರಿಂದ ಆರೋಗ್ಯಕ್ಕೆ ಹಾಗೂ ಮನಸ್ಸಿಗೆ ಸಮಾಧಾನ ಎಂದು ತಿಳಿಸಿದರು.