ದಾವಣಗೆರೆ, ಜೂ.30- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದವರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳು ಕಂಡು ಬಂದಲ್ಲಿ ಅಂತಹ ಪ್ರಕರಣಗಳಲ್ಲಿ ತಕ್ಷಣವೇ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಸೂಚಿಸಿದರು
ಅವರು ಶುಕ್ರವಾರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂ ಗಣದಲ್ಲಿ ಜರುಗಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಾಂಗದ ಮೇಲಿನ ದೌರ್ಜನ್ಯ ತಡೆ ಮತ್ತು ನಿಯಮಗಳ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಪ್ರಸಕ್ತ ವರ್ಷದ 2ನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾತ್ರಿ ವೇಳೆ ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲಾ ಆವರಣಗಳಲ್ಲಿ ಮದ್ಯ ಸೇವನೆ ಸೇರಿದಂತೆ ಕಾನೂನು ಬಾಹಿರವಾಗಿ ಯಾವುದೇ ಚಟುವಟಿಕೆಗಳು ನಡೆಯದಂತೆ ಮತ್ತು ಇಲ್ಲಿನ ಆವರಣದಲ್ಲಿ ಗಲೀಜು ಮಾ ಡುವವರ ವಿರುದ್ಧ ಪ್ರಕರಣ ದಾಖಲಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
31 ಪ್ರಕರಣಗಳು ಬಾಕಿ : ವಿಚಾರಣೆಯಲ್ಲಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಜನಾಂಗದ ದೌರ್ಜನ್ಯ ತಡೆ ನಿಯಮಗಳ ಹಾಗೂ ಅಧಿನಿಯಮದಡಿ ದಾಖಲಿಸಲ್ಪಟ್ಟ ಪ್ರಕರಣಗಳ ಬಗ್ಗೆ ಜಿಲ್ಲಾಧಿಕಾರಿ ಮಾಹಿತಿ ಪಡೆದರು. ಜನವರಿ 2023 ಕ್ಕಿಂತ ಮೊದಲು ದಾಖಲಾಗಿ ತನಿಖಾ ಹಂತದಲ್ಲಿರುವ 6 ಪ್ರಕರಣಗಳು, 2023ರಿಂದ ಜೂನ್ 27ರವರೆಗೆ 45 ಪ್ರಕರಣಗಳು ದಾಖಲಾ ಗಿದ್ದು, ತನಿಖಾ ಹಂತದಲ್ಲಿ 31 ಪ್ರಕರಣಗಳು ಬಾಕಿ ಉಳಿದಿದ್ದು, ಪರಿಹಾರಕ್ಕಾಗಿ 45 ಪ್ರಕರಣಗಳ ಪ್ರಸ್ತಾವನೆ ಸಲ್ಲಿಸಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ದೌರ್ಜನ್ಯ ಪ್ರಕರಣಗಳಲ್ಲಿ 2023 ರಿಂದ ಜೂನ್ ರವರೆಗೆ 77 ಪ್ರಕರಣಗಳು ದಾಖಲಾಗಿದ್ದು, ಸದರಿ ಪ್ರಕರಣಗಳಲ್ಲಿ 92 ಸಂತ್ರಸ್ಥರಿಗೆ ರೂ.86.5 ಲಕ್ಷ ಪರಿಹಾರ ಒದಗಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೆ. ನಾಗರಾಜ್ ಸಭೆಗೆ ಮಾಹಿತಿ ನೀಡಿದರು.
ಜಗಳೂರು ತಾಲ್ಲೂಕಿನ ಅನೇಕ ಶಾಲೆಗಳಲ್ಲಿ ಹೆಣ್ಣು ಮಕ್ಕಳಿಗೆ ಶೌಚಾಲಯದ ಕೊರತೆ ಮತ್ತು ಸಾರ್ವಜನಿಕರಿಗೆ ಬಸ್ಸಿನ ವ್ಯವಸ್ಥೆಯನ್ನು ಕಲ್ಪಿಸುವಂತೆ ಕೋರಲಾಯಿತು.
ನಗರದ ಜೆ.ಎಚ್. ಪಟೇಲ್ ಬಡಾವಣೆಯಲ್ಲಿ ಮದ್ಯಪಾನ ಮಾಡುವವರ ಹಾವಳಿ ಹೆಚ್ಚಾಗಿದ್ದು ಮದ್ಯ ವ್ಯಸನಿಗಳು ಕುಡಿದು ಬಾಟಲಿಗಳನ್ನು ಎಲ್ಲೆಂದರಲ್ಲಿ ಬಿಸಾಡುತ್ತಿದ್ದಾರೆ. ಆದ್ದರಿಂದ ಸಿಸಿ ಕ್ಯಾಮೆರಾ ವ್ಯವಸ್ಥೆ ಮತ್ತು ಪೊಲೀಸ್ ಬಂದೋಬಸ್ತ್ ಮಾಡಲು ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುರೇಶ್ ಇಟ್ನಾಳ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ, ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ವಕೀಲರ ಸಂಘದ ಜಿಲ್ಲಾಧ್ಯಕ್ಷ ರಾದ ಎಲ್.ಹೆಚ್ ಅರುಣ್‍ಕುಮಾರ್, ಸದಸ್ಯರಾದ ಕುಂದುವಾಡ ಮಂಜುನಾಥ್, ಉಮಾ, ಬಾಬಣ್ಣ ಉಪಸ್ಥಿತರಿದ್ದರು.