ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಕಾನೂನು ಜಾರಿಗೊಳಿಸಿ

ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಕಾನೂನು ಜಾರಿಗೊಳಿಸಿ

ಜಗಳೂರು : ಹುಚ್ಚವ್ವನಹಳ್ಳಿ ಮಂಜುನಾಥ್ ಆಗ್ರಹ

ಜಗಳೂರು, ಜೂ. 30 – ರಾಜ್ಯ ಸರ್ಕಾರ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಕಾನೂನು ಜಾರಿ ಮಾಡಿ ರಾಜ್ಯದ ರೈತರ ರಕ್ಷಣೆಗೆ ಧಾವಿಸಬೇಕೆಂದು ರಾಜ್ಯ ರೈತ ಸಂಘ, ಹಸಿರು ಸೇನೆ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್ ಒತ್ತಾಯಿಸಿದರು.

ಜಗಳೂರು ತಾಲ್ಲೂಕಿನ ಚಿಕ್ಕಬನ್ನಿಹಟ್ಟಿಯಲ್ಲಿಂದು ರಾಜ್ಯ ರೈತ ಸಂಘ, ಹಸಿರುಸೇನೆ ಗ್ರಾಮ ಘಟಕ ನಾಮಫಲಕ ಅನಾವರಣ ಮತ್ತು ಬಹಿರಂಗ ಸಭೆಯನ್ನು ಉದ್ದೇಶಿಸಿ  ಮಾತನಾಡಿದರು.

ಈ ಹಿಂದೆ ಕೃಷಿ ಬೆಳೆಗಳಿಗೆ ಬೆಂಬಲ ಬೆಲೆ ನಿಗದಿಪಡಿಸುವ ಪ್ರತ್ಯೇಕ ಕಾಯಿದೆ ಜಾರಿ ಮಾಡುವಂತೆ ಸಂಘದಿಂದ  ವರ್ಷಗಟ್ಟಲೇ ಹೋರಾಟ ಮಾಡಿದರೂ ಕೇಂದ್ರ ಸರ್ಕಾರ ಕಿವಿಗೊಡಲಿಲ್ಲ. ಅಂದು ಕೇಂದ್ರದ ವಿರುದ್ಧ ರೈತರ ಹೋರಾಟಕ್ಕೆ  ಸಿದ್ದರಾಮಯ್ಯ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಈ 

ಹೋರಾಟ ಬೆಂಬಲಿಸಿದ್ದರು. ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮಟ್ಟಕ್ಕಾದರೂ ಕನಿಷ್ಟ ಬೆಂಬಲ ಬೆಲೆ ಕಾನೂನು ಜಾರಿ ಮಾಡುವ ಮೂಲಕ ರೈತರ ರಕ್ಷಣೆಗೆ ಬರಬೇಕೆಂದು ಒತ್ತಾಯಿಸಿದರು.

ಜಗಳೂರು ತಾಲ್ಲೂಕಿನಲ್ಲಿ  ಬೆಸ್ಕಾಂ ಅಧಿ ಕಾರಿಗಳು ರೈತರ ಪಂಪ್‌ಸೆಟ್‌ಗಳ ವಿದ್ಯುತ್ ಪರಿವರ್ತಕಗಳು ಸುಟ್ಟಾಗ ಲಂಚ ಕೊಟ್ಟರೆ ಮಾತ್ರ ಅವುಗಳನ್ನು ಬದಲಾಯಿಸುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಬೆಳೆಗಳು ಹಾಳಾಗುತ್ತಿವೆ. ಬೆಸ್ಕಾಂ ಅಧಿಕಾರಿಗಳು ಇನ್ನು ಮುಂದೆ ಟಿಸಿ ಸುಟ್ಟ ತಕ್ಷಣ ಹೊಸ ಟಿಸಿ ಕೊಡಬೇಕು ಎಂದು ಆಗ್ರಹಿಸಿದರು.

ಕೊಂಡು ಕುರಿ ಅಭಯಾರಣ್ಯ ಅಕ್ಕಪಕ್ಕದಲ್ಲಿ ವ್ಯವಸಾಯ ಮಾಡುವ ರೈತರಿಗೆ ರಾತ್ರಿ ವೇಳೆಯಲ್ಲಿ ವಿದ್ಯುತ್ ನೀಡುವುದರಿಂದ ಚಿರತೆ, ಕರಡಿ ಇತರೆ ಕಾಡು ಪ್ರಾಣಿಗಳ ದಾಳಿಗೆ ಹೆದರಿ ವ್ಯವಸಾಯವನ್ನೇ ಬಿಡುವ ಸ್ಥಿತಿ ಇದೆ. ಈ ಸುತ್ತ ಮುತ್ತಲ ಗ್ರಾಮಗಳ ರೈತರಿಗೆ ಹಗಲು ವೇಳೆಯಲ್ಲಿಯೇ ಕನಿಷ್ಟ 5 ಗಂಟೆಗಳ ಕಾಲ ಗುಣಮಟ್ಟದ ವಿದ್ಯುತ್ ನೀಡಬೇಕೆಂದು ಮಂಜುನಾಥ್ ಒತ್ತಾಯಿಸಿದರು.

ಜಿಲ್ಲಾ ಮುಖಂಡ ಕಾನನಕಟ್ಟೆ ತಿಪ್ಪೇಸ್ವಾಮಿ ಮಾತನಾಡಿ, ಈಗಾಗಲೇ ಮುಂಗಾರು ಮಳೆ ವಿಳಂಬದಿಂದ ರೈತರು ಆತಂಕದಲ್ಲಿದ್ದಾರೆ. ಜಿಲ್ಲಾಡಳಿತ ಕೂಡಲೇ ಜನರು ಗುಳೇ ಹೋಗು ವುದನ್ನು ತಡೆದು ಅವರಿಗೆ ಉದ್ಯೋಗ ಒದಗಿ ಸುವ ಕೆಲಸ ಮಾಡಬೇಕು,  ಒತ್ತಾಯಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿಕ್ಕಬನ್ನಿಹಟ್ಟಿ ವೀರೇಶ್ ವಹಿಸಿದ್ದರು.

ಈ ಜಿಲ್ಲಾ ಪ್ರಧಾನಕಾರ್ಯದರ್ಶಿ ಚಿರಂ ಜೀವಿ, ದಿಬ್ಬದಹಳ್ಳಿ ಗಂಗಾಧರಪ್ಪ ಉಪಸ್ಥಿತರಿ ದ್ದರು.  ಗ್ರಾ.ಪಂ. ಸದಸ್ಯರಾದ ಮಹೇಶ, ಪರಮೇಶ್, ಚಂದ್ರಶೇಖರ್ ಉಪಸ್ಥಿತರಿದ್ದರು. ಸುತ್ತ ಮುತ್ತ ಗ್ರಾಮಗಳ ನೂರಾರು ರೈತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

error: Content is protected !!