ದಾವಣಗೆರೆ, ಜು.6- ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಉತ್ತರ ವಲಯದ ವತಿಯಿಂದ ಆರ್.ವಿ.ಜಿ.ಕೆ. ಶಾಲೆಯ ವಿದ್ಯಾರ್ಥಿಗಳು ಮತ್ತು ಶ್ರೀ ವಾಸವಿ ಇಂಗ್ಲಿಷ್ ಮೀಡಿಯಂ ಪ್ರೈಮರಿ ಸ್ಕೂಲ್ ಸಹಭಾಗಿತ್ವದಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ವಿಶ್ವ ಪರಿಸರ ದಿನಾಚರಣೆ ಜಾಥಾ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಚಾಲನೆಯನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಉತ್ತರ ವಲಯ ಉಪಾಧ್ಯಕ್ಷರೂ, ಕೆಎಸ್ಎಂಸಿಎ ದಾವಣಗೆರೆ ಶಾಖಾ ಕಛೇರಿ ವ್ಯವಸ್ಥಾಪಕ ಮಾರುತಿ ಆರ್. ಇವರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಆರ್.ವಿ.ಜಿ.ಕೆ. ಶಾಲೆಯ ಮುಖ್ಯೋಪಾಧ್ಯಾಯ ಕೆ.ಸಿ. ನಿರಂಜನ್ ಹಾಗೂ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಸುರೇಶ್ ಅವರು ಭಾಗವಹಿಸಿದ್ದರು. ಜನರಲ್ಲಿ ಪರಿಸರ ಜಾಗೃತಿ ಮೂಡಿಸುವ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.