ದಾವಣಗೆರೆ, ಜು. 10- ರಾಯಚೂರಿನಲ್ಲಿ ಇತ್ತೀಚಿಗೆ ವೈದ್ಯಕೀಯ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ರಾಜ್ಯಮಟ್ಟದ ಸೈಕ್ರಿಯಾಟ್ರಿ ರಸಪ್ರಶ್ನೆ ಸ್ಪರ್ಧೆಯಲ್ಲಿ ನಗರದ ಎಸ್.ಎಸ್. ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಕೇಂದ್ರದ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಎಂ. ತೇಜಸ್ ಹಾಗೂ ಎಸ್.ಪಿ. ಯುವರಾಜ್ ದ್ವಿತೀಯ ಸ್ಥಾನ ಪಡೆದಿದ್ದಾರೆ.
ದಕ್ಷಿಣ ವಲಯ ಮಟ್ಟದ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲು ಅರ್ಹರಾಗಿದ್ದಾರೆ.
ವಿಜೇತರನ್ನು ಸಂಸ್ಥೆಯ ಪೋಷಕರಾದ ಡಾ. ಶಾಮನೂರು ಶಿವಶಂಕರಪ್ಪ, ಎಸ್.ಎಸ್. ಮಲ್ಲಿಕಾರ್ಜುನ್, ಬಾಪೂಜಿ ವಿದ್ಯಾಸಂಸ್ಥೆ ಸದಸ್ಯರಾದ ಪ್ರಭಾ ಮಲ್ಲಿಕಾರ್ಜುನ್, ಪ್ರಾಂಶುಪಾಲರಾದ ಡಾ. ಬಿ.ಎಸ್. ಪ್ರಸಾದ್, ನಿರ್ದೇಶಕ ಡಾ. ಅರುಣ್ ಕುಮಾರ್ ಅಜ್ಜಪ್ಪ, ಉಪ ಪ್ರಾಂಶುಪಾಲರಾದ ಡಾ. ಶಶಿಕಲಾ ಕೃಷ್ಣಮೂರ್ತಿ ಅಭಿನಂದಿಸಿದ್ದಾರೆ. ಮಾನಸಿಕ ವಿಭಾಗದ ಮುಖ್ಯಸ್ಥ ಡಾ. ಮೃತ್ಯುಂಜಯ, ಸಹ ಪ್ರಾಧ್ಯಾಪಕ ಡಾ. ಮೃನಾಲ್ ಶೇಕ್, ಕ್ಲಿನಿಕಲ್ ಸೈಕಾಲಜಿಸ್ಟ್ ಡಾ.ಹೆಚ್.ಎನ್. ಆಶಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು.