ಶಾಸಕ ಬಸವರಾಜು ವಿ. ಶಿವಗಂಗಾ
ಚನ್ನಗಿರಿ, ಜು. 17- ಜಾಗತಿಕ ಜನಸಂಖ್ಯೆಯ ಸಮಸ್ಯೆ ಕುರಿತು ಜಾಗೃತಿ ಮೂಡಿಸಲು ವಿಶ್ವ ಜನಸಂಖ್ಯಾ ದಿನ ಆಚರಣೆ ಮಾಡುತ್ತೇವೆ. ಭಾರತದಲ್ಲಿ ಜನಸಂಖ್ಯೆ ಹೆಚ್ಚಾಗುತ್ತಿರುವುದು ಎಲ್ಲರಿಗೂ ಆತಂಕಕಾರಿ ವಿಷಯ. ನಾವೆಲ್ಲಾ ಜನಸಂಖ್ಯೆ ನಿಯಂತ್ರಣಕ್ಕೆ ಮುಂದಾಗಿ, ಆರೋಗ್ಯ ಇಲಾಖೆ ನೀಡುವ ಸಲಹೆಯನ್ನು ಅನುಸರಿಸಬೇಕು. ಆರೋಗ್ಯ ಇಲಾಖೆ ಕೂಡ ಜನಸಂಖ್ಯೆ ಕಡಿಮೆ ಮಾಡಲು ಜನರಿಗೆ ಅರಿವು, ಜಾಗೃತಿ ಮೂಡಿಸಬೇಕು ಎಂದು ಬಸವರಾಜು ವಿ. ಶಿವಗಂಗಾ ತಿಳಿಸಿದರು.
ಪಟ್ಟಣದ ತಾಲ್ಲೂಕು ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಆರೋಗ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸೇರಿದಂತೆ, ಸಾರ್ವಜನಿಕರು ಉಪಸ್ಥಿತರಿದ್ದರು.