ದಾವಣಗೆರೆ, ಜು. 17 – ನಗರದ ದೇವರಾಜ ಅರಸು ಬಡಾವಣೆಯಲ್ಲಿರುವ ಎಸ್.ಕೆ.ಪಿ. ವಿದ್ಯಾಪೀಠದ ಅಡಿಯಲ್ಲಿ ನಡೆಯುತ್ತಿರುವ ಶ್ರೀ ವಾಸವಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮವನ್ನು ಮಕ್ಕಳಿಂದ ಬಹಳ ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು. ಮುಖ್ಯೋಪಾಧ್ಯಾಯರಾದ ಕೊಟ್ರೇಶ್ ಅವರು ಮಕ್ಕಳಿಗೆ ಜೀವನದಲ್ಲಿ ಗುರುವಿನ ಸ್ಥಾನದ ಮಹತ್ವವನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಸಿಬ್ಬಂದಿ ವರ್ಗದವರು ಮಕ್ಕಳು ಹಾಜರಿದ್ದರು