ರಕ್ತದಾನದಿಂದ ಆರೋಗ್ಯ ರಕ್ಷಣೆ ಮಾಡಿಕೊಳ್ಳಲು ಸಾಧ್ಯ

ರಕ್ತದಾನದಿಂದ ಆರೋಗ್ಯ ರಕ್ಷಣೆ ಮಾಡಿಕೊಳ್ಳಲು ಸಾಧ್ಯ

ಹರಪನಹಳ್ಳಿ ಎಡಿಬಿ ಪದವಿ ಮಹಾವಿದ್ಯಾಲಯದ ಅಧ್ಯಕ್ಷರಾದ ಕೋರಿ ವಿರೂಪಾಕ್ಷಪ್ಪ ಅಭಿಮತ

ಹರಪನಹಳ್ಳಿ, ಜು. 19-ರಕ್ತದಾನ ಮಾಡುವು ದರಿಂದ ಆರೋಗ್ಯ ರಕ್ಷಣೆ ಮಾಡಿಕೊಳ್ಳಲು ಸಾಧ್ಯ ಎಂದು ಎಡಿಬಿ ಪದವಿ ಮಹಾವಿದ್ಯಾಲಯದ ಅಧ್ಯಕ್ಷರಾದ ಕೋರಿ ವಿರೂಪಾಕ್ಷಪ್ಪ ಹೇಳಿದರು.

ಪಟ್ಟಣದ ಅಂಬ್ಲಿ ದೊಡ್ಡ ಭರ್ಮಪ್ಪ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮತ್ತು ರಕ್ತ ತಪಾಸಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜೊತೆಗೆ ಶಿಸ್ತನ್ನು ರೂಢಿಸಿಕೊಳ್ಳಬೇಕು. ಉತ್ತಮ ಆರೋಗ್ಯ ಹೊಂದಿದಲ್ಲಿ ಏನಾದರೂ ಸಾಧಿಸಬಹುದು. ಆದ್ದರಿಂದ ಎಲ್ಲರೂ ಉತ್ತಮ ಆರೋಗ್ಯ, ಉತ್ತಮ ಶಿಕ್ಷಣ ಎನ್ನುವ ಧ್ಯೇಯವನ್ನು ಹೊಂದಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಸುಮಾರು 30ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ರಕ್ತದಾನ ಮಾಡಿದರು. ಕಾಲೇಜಿಗೆ ಆಗಮಿಸಿದ ಎಲ್ಲಾ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಹಾಗೂ ರಕ್ತ ತಪಾಸಣೆ ನಡೆಸಲಾಯಿತು.

ಹಗರಿಬೊಮ್ಮನಹಳ್ಳಿಯ ಸ್ವಾಮಿ ವಿವೇಕಾನಂದ ರಕ್ತ ಭಂಡಾರದ ಮುಖ್ಯಸ್ಥ ಸಿ.ಜಿ.ಗೋಪಾಲ ರೆಡ್ಡಿ, ಡಾ. ಗುರುರಾಜ್,  ಆಪ್ತ ಸಮಾಲೋಚಕರಾದ ಅಂಜು ಕುಮಾರಿ, ಚಂದನ, ವಿವಿ ಸಂಘದ ಸದಸ್ಯ ಕರಿಬಸಪ್ಪ, ಕಾಲೇಜು ಪ್ರಾಚಾರ್ಯ ಡಾ. ಎಸ್.ಎಂ. ಸಿದ್ದಲಿಂಗಮೂರ್ತಿ, ಎನ್‍ಎಸ್‍ಎಸ್ ಅಧಿಕಾರಿಗಳು, ಬೋಧಕ, ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.

error: Content is protected !!