ಚನ್ನಗಿರಿ, ಜು. 24- ಮುಂಬರುವ 2024 ರ ಲೋಕಸಭಾ ಚುನಾವಣೆಯ ದಾವಣಗೆರೆ ಲೋಕಸಭಾ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದು, ಕಾಂಗ್ರೆಸ್ ಪಕ್ಷ ನನ್ನನ್ನು ಗುರುತಿಸಿ, ಟಿಕೆಟ್ ನೀಡಿದರೆ ಕ್ಷೇತ್ರದ ಸರ್ವಾಂಗೀಣ ಪ್ರಗತಿಗೆ ಶಕ್ತಿ ಮೀರಿ ಪ್ರಯತ್ನಿಸುತ್ತೇನೆ ಎಂದು ಬೆಂಗಳೂರು ಇನ್‌ಸೈಟ್ಸ್ ಐಎಎಸ್ ಸಂಸ್ಥಾಪಕ ಜಿ.ಬಿ. ವಿನಯ್‌ಕುಮಾರ್ ಹೇಳಿದ್ದಾರೆ.
ಚನ್ನಗಿರಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಈಗಾಗಲೇ ದಾವಣಗೆರೆ ಲೋಕಸಭಾ ವ್ಯಾಪ್ತಿಗೆ ಬರುವ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಪಕ್ಷ ಸಂಘಟನೆಗೆ ಮುಂದಾಗಿದ್ದು, ಪಕ್ಷ ಯಾರಿಗೇ ಟಿಕೆಟ್ ನೀಡಿದರೂ ಅಭ್ಯರ್ಥಿ ಗೆಲುವಿಗೆ ಶ್ರಮಿಸುವುದಾಗಿ ತಿಳಿಸಿದರು. ಬೆಂಗಳೂರಿನಲ್ಲಿ ಯುಪಿಎಸ್‌ಸಿ ಹಾಗೂ ಕೆಪಿಎಸ್ಸಿ ಪರೀಕ್ಷಾ ತರಬೇತಿ ಕೇಂದ್ರಗಳನ್ನು ತೆರೆದು ತರಬೇತಿ ನೀಡುತ್ತಿದ್ದೇನೆ. ಭಾರತ ದೇಶದ ಎಲ್ಲಾ ಭಾಗಗ ಳಲ್ಲೂ ನಮ್ಮಲ್ಲಿ ತರಬೇತಿ ಪಡೆದ ಐಎಎಸ್, ಐಪಿಎಸ್ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದರು.
ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಚಂದ್ರನಾಯ್ಕ, ರಮೇಶ್, ವಿರಾಟ್ ಹರೀಶ್, ಜಗದೀಶ್, ಹಾಲೇಶ್, ಇಮ್ರಾನ್ ಮತ್ತಿತರರು ಭಾಗವಹಿಸಿದ್ದರು.