ಚನ್ನಗಿರಿ, ಆ. 4- ವಿದ್ಯಾರ್ಥಿಗಳು ಆತ್ಮವಿಶ್ವಾಸ, ಮಾನಸಿಕ ಜಾಗರೂಕತೆ ಮತ್ತು ಸ್ವಾಭಿಮಾನವನ್ನು ಹೆಚ್ಚಿಸಲು ಶಾಲಾ ಕ್ರೀಡೆಗಳಲ್ಲಿ ಭಾಗವಹಿಸಬೇಕು. ಶಾಲೆಗಳಲ್ಲಿ ಕ್ರೀಡೆಯು ಮುಖ್ಯವಾಗಿದೆ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಅವರು, ನೀತಿಗೆರೆ ಗ್ರಾಮದ ಎಸ್.ವಿ.ಎಸ್. ಹಿ.ಪ್ರಾ. ಶಾಲೆಯಲ್ಲಿ ಚಿಕ್ಕಗಂಗೂರು ಹೆಬ್ಬಳಗೆರೆ ಕ್ಲಸ್ಟರ್ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಕ್ರೀಡೆಯಿಂದ ನಾಯಕತ್ವ, ತಾಳ್ಮೆ, ತಂಡದ ಪ್ರಯತ್ನಗಳು ಮತ್ತು ಸಾಮಾಜಿಕ ಕೌಶಲ್ಯಗಳಂತಹ ವಿವಿಧ ಕೌಶಲ್ಯಗಳನ್ನು ವಿದ್ಯಾರ್ಥಿಗಳಿಗೆ ಕಲಿಸಲು ಸಹಾಯ ಮಾಡುತ್ತದೆ. ಕ್ರೀಡೆಗಳು ವಿದ್ಯಾರ್ಥಿಗಳು ಸದೃಢವಾಗಿ ಮತ್ತು ಆರೋಗ್ಯವಾಗಿರಲು ಸಹಾಯ ಮಾಡುತ್ತದೆ ಎಂದರು.
ನಂತರ ದೇವರಹಳ್ಳಿ ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ದೇವರಹಳ್ಳಿ-ಕಗತೂರು ಕ್ಲಸ್ಟರ್ ಮಟ್ಟದ ಕ್ರೀಡಾಕೂಟಕ್ಕೂ ಶಾಸಕ ಬಸವರಾಜು ವಿ. ಶಿವಗಂಗಾ ಚಾಲನೆ ನೀಡಿದರು. ಶಿಕ್ಷಣ ಇಲಾಖೆ ಅಧಿಕಾರಿಗಳು ಗ್ರಾಮದ ಮುಖಂಡರು ಉಪಸ್ಥಿತರಿದ್ದರು.