ಜಗಳೂರು, ಆ.4- ತಾಲ್ಲೂಕಿನ ಕ್ಯಾಸೇನಹಳ್ಳಿ ಗ್ರಾಮ ಪಂಚಾಯತಿ ಎರಡನೇ ಅವಧಿಯ ನೂತನ ಅಧ್ಯಕ್ಷರಾಗಿ ಶ್ರೀಮತಿ ಎ.ಡಿ.ಬಸಮ್ಮ ಮಂಜಣ್ಣ ಹಾಗು ಉಪಾಧ್ಯಕ್ಷರಾಗಿ ಹನುಮಂತಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕ್ಯಾಸೇನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 18 ಸದಸ್ಯರು ಇದ್ದು ಎರಡನೇ ಅವಧಿಯ ಅಧ್ಯಕ್ಷ ಸ್ಥಾನವು ಪರಿಶಿಷ್ಠ ಜಾತಿ ಮಹಿಳೆ ಹಾಗು ಉಪಾಧ್ಯಕ್ಷರ ಸ್ಥಾನ ಸಾಮಾನ್ಯ ಸ್ಥಾನಕ್ಕೆ ಮೀಸಲಾಗಿತ್ತು ಶುಕ್ರವಾರ ಚುನಾವಣೆ ನಡೆಯಿತು. ಅಧ್ಯಕ್ಷರ ಸ್ಥಾನಕ್ಕೆ ಬಸಮ್ಮ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹನುಮಂತಪ್ಪ ಒಬ್ಬರೇ ನಾಮಪತ್ರ ಸಲ್ಲಿಸಿದ್ದು ನಾಮಪತ್ರ ಸ್ವೀಕಾರ ನಂತರ ಇಬ್ಬರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣೆ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಮೀನುಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಗಿರೀಶ್ ಕುಮಾರ್ ಘೋಷಣೆ ಮಾಡಿದರು.