ದಾವಣಗೆರೆ, ಆ. 9 – ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನ ಸಂಘದಿಂದ 67ನೇ ವರ್ಷದ 1008 ಶ್ರೀ ಸತ್ಯನಾರಾಯಣ ಸ್ವಾಮಿ ಪೂಜೆಯನ್ನು ಶನಿವಾರ ಇಲ್ಲಿನ ಎಸ್‌ಕೆಪಿ ರಸ್ತೆಯಲ್ಲಿರುವ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಲೋಕಕಲ್ಯಾಣಾರ್ಥವಾಗಿ ಹಾಗೂ ಸರ್ವರ ಶ್ರೇಯೋಭಿವೃದ್ಧಿಗಾಗಿ ನಡೆದ ಈ ಪೂಜೆ ಮೊದಲು ಗಣಪತಿ ಪೂಜೆ, ಜನಾರ್ದನ ಸ್ವಾಮಿಗೆ ವಿಶೇಷ ಪಂಚಾಮೃತ ಮತ್ತು ಸುಗಂಧ ದ್ರವ್ಯಗಳಿಂದ ಅಭಿಷೇಕ ನಡೆಯಿತು. ನಂತರ ವಿಶೇಷ ಅಲಂಕಾರ ಹಾಗೂ ಫಲ ಸಮರ್ಪಿಸಲಾಯಿತು.
ಮಹಾಗಣಪತಿ, ನವಗ್ರಹ ಪೂಜೆ, ಸತ್ಯನಾರಾಯಣ ಸ್ವಾಮಿ ವ್ರತ ಪೂಜೆ, ಕಥಾ ಶ್ರವಣ, ಮಹಾಮಂಗಳಾರತಿ ಕಾರ್ಯಕ್ರಮಗಳು ನಡೆದವು.
ಸಂಜೆ ಸತ್ಯನಾರಾಯಣ ಸ್ವಾಮಿಗೆ ರಥಾರೋಹಣ, ಉಯ್ಯಾಲೆ ಸೇವೆ, ಮಂತ್ರ-ಪುಷ್ಪ ಅಷ್ಟಾವಧಾನ, ಸಮಸ್ತ ಭಕ್ತ ಶ್ರೇಯಃ ಪ್ರಾರ್ಥನೆ ನಂತರ ಪ್ರಸಾದ ವಿನಿಯೋಗ ನಡೆಯಿತು.
ಕನ್ನಿಕಾ ಪರಮೇಶ್ವರಿ ದೇವಸ್ಥಾನ ಸಂಘದ ಅಧ್ಯಕ್ಷ ಆರ್.ಎಲ್. ಪ್ರಭಾಕರ, ಕಾರ್ಯಾಧ್ಯಕ್ಷ ಕಾಸಲ್ ಎಸ್. ಸತೀಶ್, ಪ್ರಧಾನ ಕಾರ್ಯದರ್ಶಿ ರವೀಂದ್ರಗುಪ್ತ ಹಾಗೂ ಸಂಘದ ಪದಾಧಿಕಾರಿಗಳು, ಸಮಾಜ ಬಾಂಧವರು ಭಾಗವಹಿಸಿದ್ದರು.