ದಾವಣಗೆರೆ, ಆ. 10 – ತಾಲ್ಲೂಕಿನ ಬಸವನಾಳು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ನೇತ್ರಾವತಿ ಕೆ. ನಾಗರಾಜ್ ಹಾಗೂ ಉಪಾಧ್ಯಕ್ಷರಾಗಿ ಬಿ. ಕುಬೇರಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗ್ರಾಮೀಣ ಕುಡಿಯುವ ನೀರು ಯೋಜನೆ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಬಿ. ರವೀಂದ್ರನಾಯ್ಕ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಮುದೇಗೌಡ್ರು ಗಿರೀಶ್, ಬೇತೂರು ಕರಿಬಸಪ್ಪ, ಕಾರ್ಮಿಕ ಮುಖಂಡ ಆವರಗೆರೆ ಹೆಚ್.ಜಿ. ಉಮೇಶ್ ಹಾಗೂ ಬಸವನಾಳ್, ಬಸವನಾಳ್ ಗೊಲ್ಲರಹಟ್ಟಿ, ರಾಂಪುರ, ಲಿಂಗದಹಳ್ಳಿ, ಲಿಂಗದಹಳ್ಳಿ ಲಂಬಾಣಿಹಟ್ಟಿ ಗ್ರಾಮಗಳ ಮುಖಂಡರು ಹಾಜರಿದ್ದರು.
January 23, 2025