ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವ ಎಸ್ಸೆಸ್ಸೆಮ್ ಚಾಲನೆ

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವ ಎಸ್ಸೆಸ್ಸೆಮ್ ಚಾಲನೆ

ದಾವಣಗೆರೆ, ಆ.12- ಮಹಾನಗರ ಪಾಲಿಕೆಯ 30 ನೇ ವಾರ್ಡ್ ವ್ಯಾಪ್ತಿಯ ಪಿ.ಬಸವನಗೌಡ ಬಡಾವಣೆ 2 ನೇ ಮೇನ್, 6 ನೇ ಕ್ರಾಸ್‌ನಲ್ಲಿ 27.75 ಲಕ್ಷ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಇಂದು ಸಂಜೆ ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಜನಪರ ಆಡಳಿತ ನೀಡುತ್ತಿದ್ದು, ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಹೆಸರನ್ನು ಉಳಿಸುವ ನಿಟ್ಟಿನಲ್ಲಿ ನಾವುಗಳು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ತೋರಿಸಬೇಕಾಗಿದೆ ಎಂದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಪಣ ತೋಡಬೇಕಾಗಿದೆ ಎಂದು ಹೇಳಿದರು.

ಅನ್ನಭಾಗ್ಯ ಯೋಜನೆ, ಉಚಿತ ವಿದ್ಯುತ್, ಬಸ್ ಪ್ರಯಾಣ, ಮನೆ ಯಾಜಮಾನಿಗೆ ಎರಡು ಸಾವಿರ ರೂ. ಹಣವನ್ನು ನೇರವಾಗಿ ಖಾತೆಗೆ ಜಮಾ ಮಾಡುವುದು ಸೇರಿದಂತೆ ಐದು ಗ್ಯಾರಂಟಿಗಳನ್ನು ಸಮರ್ಪಕವಾಗಿ ಜಾರಿ ಮಾಡುವ ಮೂಲಕ ಜನರ  ಆಶೋತ್ತರಗಳಿಗೆ ಸ್ಪಂದಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದರು.

ಪಿ. ಬಸವನಗೌಡ ಬಡಾವಣೆಯ 6 ನೇ ಕ್ರಾಸ್ ರಸ್ತೆ ಅಭಿವೃದ್ಧಿಪಡಿಸಲು ಚಾಲನೆ ನೀಡಲಾಗಿದ್ದು, ಈ ಭಾಗದ ರೈಲ್ವೆ ಅಂಡರ್ ಪಾಸ್, ಸ್ಮಶಾನ ದಾರಿ ಬಗ್ಗೆ ಸರಿಯಾದ ತನಿಖೆ ನಡೆಸಿ ಮುಂದಿನ ದಿನಗಳಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿ ಜಯಮ್ಮ ಗೋಪಿನಾಯ್ಕ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ತಮ್ಮ ವಾರ್ಡ್ ಕಾಮಗಾರಿಗಳು, ಜನಪರ ಕೆಲಸಗಳ ಬಗ್ಗೆ ಗಮನಹರಿಸುವಂತೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಮೇಯರ್ ಜಯಮ್ಮ ಗೋಪಿನಾಯ್ಕ, 30 ನೇ ವಾರ್ಡ್ ಕಾಂಗ್ರೆಸ್ ಮುಖಂಡ ಗೋಪಿನಾಯ್ಕ, ಜಿ. ನವೀನ್, ಪಾಲಿಕೆ ಸದಸ್ಯರಾದ ಕೆ. ಚಮನ್‌ಸಾಬ್, ಗಡಿಗುಡಾಳ್ ಮಂಜು ನಾಥ್, ಗಣೇಶ್ ಹುಲ್ಮನಿ, ಮಹಾನಗರ ಪಾಲಿಕೆ ಆಯುಕ್ತರಾದ ರೇಣುಕ, ತಹಶೀಲ್ದಾರ್. ಡಾ. ಅಶ್ವತ್ಥ್‌, ಇಂಜಿನಿಯರ್ ಬಿರಾದಾರ್ ಮತ್ತಿತರರು ಉಪಸ್ಥಿತರಿದ್ದರು.

error: Content is protected !!