ಹರಿಹರದಲ್ಲಿ ಹೈಟೆಕ್ ಬಸ್ ನಿಲ್ದಾಣ

ಹರಿಹರದಲ್ಲಿ ಹೈಟೆಕ್ ಬಸ್ ನಿಲ್ದಾಣ

ಸಚಿವ ರಾಮಲಿಂಗಾರೆಡ್ಡಿಗೆ ಮುಖಂಡ ನಂದಿಗಾವಿ ಶ್ರೀನಿವಾಸ್ ಮನವಿ

ಹರಿಹರ, ಅ. 23 – ನಗರಕ್ಕೆ ಹೊಸದಾಗಿ ಹೈಟೆಕ್ ಬಸ್ ನಿಲ್ದಾಣ ನಿರ್ಮಿಸಲು ಅನುದಾನ ಬಿಡುಗಡೆ ಮಾಡಬೇಕೆಂದು ಕಾಂಗ್ರೆಸ್ ಮುಖಂಡ ನಂದಿಗಾವಿ ಶ್ರೀನಿವಾಸ್ ಅವರು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.

ಹರಿಹರ ಬಸ್ ನಿಲ್ದಾಣದ ಕಟ್ಟಡ ಶಿಥಿಲವಾಗಿದೆ. ಪ್ರಯಾಣಿಕರಿಗೆ ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯಗಳ ಕೊರತೆ ಇದೆ. ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಬಸ್‌ಗಳು ನಗರಕ್ಕೆ ಬಂದು ಹೋಗುತ್ತವೆ. ಸೌಲಭ್ಯಗಳಿಲ್ಲದ ಕಾರಣ ಜನರಿಗೆ ಸಮಸ್ಯೆಯಾಗಿದೆ ಎಂದವರು ಹೇಳಿದರು.

ಸರ್ಕಾರ ಈವಾಗ ಸಾಕಷ್ಟು ಪ್ರಮಾಣದಲ್ಲಿ, ಹಣವನ್ನು ಗ್ಯಾರಂಟಿ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಒದಗಿಸುತ್ತಿರುವುದರಿಂದ ತಕ್ಷಣವೇ ಹೈಟೆಕ್ ಬಸ್ ನಿಲ್ದಾಣಕ್ಕೆ ಹಣ ಮಂಜೂರು ಮಾಡುವುದಕ್ಕೆ ಆಗುವುದಿಲ್ಲ. ಆದರೆ ತಾತ್ಕಾಲಿಕವಾಗಿ ಶೌಚಾಲಯ ಮತ್ತು ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಸಿರೀಕರಣ ಮತ್ತು ಈಗಿರುವ ಕಟ್ಟಡವನ್ನು ದುರಸ್ತಿ ಪಡಿಸುವುದಕ್ಕೆ 2 ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡುವುದಾಗಿ ಸಚಿವರು ತಿಳಿಸಿದ್ದಾರೆ ಎಂದು ಶ್ರೀನಿವಾಸ್ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಸಂತೋಷ ನೋಟದವರ್, ಕಿರಣ್ ಭೂತೆ, ವಿಜಯಕುಮಾರ್, ನಾರಾಯಣ್, ನಿಧಿ ಇತರರು ಹಾಜರಿದ್ದರು.

error: Content is protected !!