ಸರ್ಕಾರದ ಯೋಜನೆಗಳನ್ನು ಬಡವರಿಗೆ ತಲುಪಿಸುವ ಕೆಲಸ ಮಾಡಿ

ಸರ್ಕಾರದ ಯೋಜನೆಗಳನ್ನು ಬಡವರಿಗೆ ತಲುಪಿಸುವ ಕೆಲಸ ಮಾಡಿ

ಹಾಲಿವಾಣದ ಅಭಿನಂದನಾ ಸಮಾರಂಭದಲ್ಲಿ ಮಾಜಿ ಶಾಸಕ ಎಸ್.ರಾಮಪ್ಪ ಮನವಿ

ಮಲೇಬೆನ್ನೂರು, ಆ.24- ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪುವಂತೆ ಮಾಡಲು ಕಾಂಗ್ರೆಸ್ ಕಾರ್ಯಕರ್ತರು ಶ್ರಮಿಸಬೇಕೆಂದು ಮಾಜಿ ಶಾಸಕ ಎಸ್.ರಾಮಪ್ಪ ಹೇಳಿದರು.

ಹಾಲಿವಾಣ ಗ್ರಾಮದ ಶ್ರೀ ರೇವಣಸಿದ್ದೇಶ್ವರ ಸಮುದಾಯ ಭವನದಲ್ಲಿ ಹಾಲಿವಾಣ ಗ್ರಾ.ಂ. ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು – ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಮತ್ತು ಮತದಾರರಿಗೆ ಇಂದು ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.

ಗ್ಯಾರಂಟಿ ಯೋಜನೆಗಳು ಎಲ್ಲಾ ಜನರಿಗೆ ಸುಲಭವಾಗಿ ಸಿಗುವಂತೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಈ ವರ್ಷ ಅಭಿವೃದ್ಧಿಗೆ ನಿರೀಕ್ಷೆ ಮಾಡಿದಷ್ಟು ಅನುದಾನ ಸಿಗುವುದು ಕಷ್ಣವಾಗುತ್ತದೆ. ಮುಂದಿನ ವರ್ಷದಿಂದ ಅಭಿವೃದ್ಧಿಗೆ ಹೆಚ್ಚಿನ ಒತ್ತು ಸಿಗಲಿದೆ ಎಂದು ರಾಮಪ್ಪ ಹೇಳಿದರು.

ಕಾಂಗ್ರೆಸ್ ಮುಖಂಡ ನಂದಿಗಾವಿ ಶ್ರೀನಿವಾಸ್ ಮಾತನಾಡಿ, ಚುನಾಯಿತ ಜನಪ್ರತಿನಿಧಿಗಳು ತಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಬೇಕು. ಜನರಿಗೆ ಮೂಲಭೂತ ಸೌಲಭ್ಯ ಒದಗಿಸಲು ಒತ್ತು ನೀಡಬೇಕು. ಸರ್ಕಾರದಿಂದ ಆಗುವ ಕೆಲಸಗಳನ್ನು ನಾನು ಮಾಡಿಸಿಕೊಡುತ್ತೇನೆಂದರು. 

ಎಪಿಎಂಸಿ ಮಾಜಿ ಅಧ್ಯಕ್ಷ ಜಿ.ಮಂಜುನಾಥ್ ಪಟೇಲ್, ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ಕುಂಬಳೂರು ವಿರೂಪಾಕ್ಷಪ್ಪ, ತಾ.ಪಂ. ಮಾಜಿ ಅಧ್ಯಕ್ಷ ಎಸ್.ಜಿ.ಪರಮೇಶ್ವರಪ್ಪ ಮಾತನಾಡಿದರು.

ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಲಕ್ಷ್ಮಿದೇವಿ ಎಸ್.ಜಿ.ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ಡಿಸಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಜಿಗಳಿ ಆನಂದಪ್ಪ, ಕಾಂಗ್ರೆಸ್
ಓಬಿಸಿ ಅಧ್ಯಕ್ಷ ಕೆ.ಪಿ.ಗಂಗಾಧರ್, ಕಿಸಾನ್
ಕಾಂಗ್ರೆಸ್ ಅಧ್ಯಕ್ಷ ಕುಂಬಳೂರು ವಾಸು, ಪುರಸಭೆ ಮಾಜಿ ಸದಸ್ಯ ಎ.ಆರೀಫ್ ಅಲಿ, ಜನತಾ ಬಜಾರ್ ನಿರ್ದೇಶಕ ಪಿ.ಹೆಚ್.ಶಿವಕುಮಾರ್, ಮಲೇಬೆನ್ನೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಭೋವಿಕುಮಾರ್, ಹೋಟೆಲ್ ಪರಮೇಶ್ವರಪ್ಪ, ಕೊಪ್ಪದ ಮಲ್ಲಪ್ಪ, ಗ್ರಾ.ಪಂ.ಮಾಜಿ ಅಧ್ಯಕ್ಷ ಡಿ.ಡಿ.ಚಿಕ್ಕಣ್ಣ, ಎಸ್.ಎಂ.ಮಂಜುನಾಥ್, ಎಸ್.ಜಿ.ಸಿದ್ದಪ್ಪ, ಹರಲೀಪುರದ ಮಹಾದೇವಪ್ಪ, ವಕೀಲ ಜಿ.ಹೆಚ್.ಬಸವರಾಜ್, ಕೆ.ಪಿ.ಕುಮಾರಸ್ವಾಮಿ, ಸಿದ್ದಯ್ಯ ಸ್ವಾಮಿ, ಎಸ್.ಜಿ.ಹಾಲೇಶಪ್ಪ, ಟಿ.ತಿಪ್ಪೇಶ್, ಟಿ.ಯೋಗೇಶ್, ಎ.ಕೆ.ಹನುಮಂತಪ್ಪ, ಬಿ.ಮಂಜಪ್ಪ, ಪೂಲೇಪ್ಪ ಶ್ರೇಷ್ಠಿ ಸೇರಿದಂತೆ ಇನ್ನೂ ಅನೇಕರು ಭಾಗವಹಿಸಿದ್ದರು.

ಈ ವೇಳೆ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಪರಮೇಶ್ವರನಾಯ್ಕ ಕಾಂಗ್ರೆಸ್ ಸೇರ್ಪಡೆಯಾದರು.

ಗ್ರಾ.ಪಂ. ಉಪಾಧ್ಯಕ್ಷೆ ಕಮಲಾಬಾಯಿ, ಹಾ.ಉ.ಸ. ಸಂಘದ ಅಧ್ಯಕ್ಷ ಡಿ.ಜಿ.ರಾಘವೇಂದ್ರ, ಉಪಾಧ್ಯಕ್ಷ ಗಂಗಾಮತ ಭರ್ಮಪ್ಪ, ಪಿಎಸಿಎಸ್ ಅಧ್ಯಕ್ಷ ಎಸ್.ಬಿ.ಕರಿಯಪ್ಪ, ಉಪಾಧ್ಯಕ್ಷ ಜೋಗಳ್ಳಿ ಕೃಷ್ಣಪ್ಪ ಹಾಗೂ ಎಲ್ಲಾ ಸದಸ್ಯರು ಮತ್ತು ಹರಳಹಳ್ಳಿ ಗ್ರಾ.ಪಂ. ಅಧ್ಯಕ್ಷ ಎಂ.ಹೆಚ್.ಹನುಮಂತಪ್ಪ ಸೇರಿದಂತೆ ಹಾಲಿವಾಣ ಗ್ರಾಮದ ಎಲ್ಲಾ ಸಮಾಜದ ಮುಖಂಡರನ್ನು ಸನ್ಮಾನಿಸಿ, ಗೌರವಿಸಲಾಯಿತು.

error: Content is protected !!