ದಾವಣಗೆರೆ, ಆ. 27- ನಗರದ ಹೊಂಡದ ವೃತ್ತದಲ್ಲಿರುವ ಶ್ರೀ ಗುರು ಕರಿಬಸವೇಶ್ವರ ಸ್ವಾಮಿಯ ಗೋಪುರದ ಕಳಸಾರೋಹಣ ಧಾರ್ಮಿಕ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಶಾಸಕ ಶಾಮನೂರು ಶಿವಶಂಕರಪ್ಪ ಭಾಗವಹಿಸಿ, ವಿಶೇಷ ಪೂಜೆ ಸಲ್ಲಿಸಿದರು.
ಆವರಗೊಳ್ಳದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿದ್ದರು. ಮುಖಂಡರುಗಳಾದ ಡಿ.ಮಾಲತೇಶ್ ರಾವ್ ಜಾಧವ್, ಪಾಲಿಕೆ ಮೇಯರ್ ವಿನಾಯಕ ಪೈಲ್ವಾನ್, ದಿನೇಶ್ ಕೆ ಶೆಟ್ಟಿ ಸೇರಿದಂತೆ, ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಭಕ್ತರು ಉಪಸ್ಥಿತರಿದ್ದರು.