ದಾವಣಗೆರೆ, ಆ.30- ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ವಿಜಯ ಸಾಧಿಸಿದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ನೂರು ದಿನಗಳು ಪೂರೈಸಿದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ಸಂಭ್ರಮಾಚರಣೆ ಮಾಡಲಾಯಿತು.
ನಗರದ ಅಕ್ಕಮಹಾದೇವಿ ರಸ್ತೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ನಂತರ ಕಾರ್ಯಕರ್ತ ರನ್ನುದ್ದೇಶಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ನೆಮ್ಮದಿ ಜೀವನ ನಡೆಸುವಂತಾಗಿದೆ. ಕಾಂಗ್ರೆಸ್ ಮಹಿಳೆಯರಿಗೆ ಆರ್ಥಿಕ ಸ್ವಾವಲಂಬಿ ಜೀವನ ನಡೆಸಲು ಅನುಕೂಲ ಮಾಡಿಕೊಟ್ಟಿದೆ ಎಂದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮಾಜಿ ಸದಸ್ಯ ಎ. ನಾಗರಾಜ್, ಮಾಜಿ ಸದಸ್ಯ ಡಿ.ಎನ್. ಜಗದೀಶ್, ಹನುಮಂತಪ್ಪ, ಮಾಲತೇಶ್, ಶಶಿಧರ್, ಸತೀಶ್ ಶೆಟ್ಟಿ, ಆರೋಗ್ಯ ಸ್ವಾಮಿ, ಮಧು ಪವಾರ್, ಗೋಪಾಲ್, ಪರಶುರಾಮ್ ಮತ್ತಿತರರಿದ್ದರು.