ದಾವಣಗೆರೆ, ಆ.30- ತಾಲ್ಲೂಕಿನ ಎಲೆಬೇತೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಗೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀಮತಿ ಶಾಂತಮ್ಮ ಬಸನಗೌಡ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅನುಷ್ಠಾನಕ್ಕೆ ಚಾಲನೆ ನೀಡಿದರು.
ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಿ. ಕರಿಬಸಪ್ಪ, ಗ್ರಾಮದ ಹಿರಿಯರಾದ ಎಚ್. ಬಸವರಾಜಪ್ಪ, ಗ್ರಾ.ಪಂ. ಸದಸ್ಯ ಹಂಚಿನಮನಿ ಚೇತನ್ ಕುಮಾರ್ ಗೃಹಲಕ್ಷ್ಮಿ ಯೋಜನೆ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ನೋಡಲ್ ಅಧಿಕಾರಿ ರವೀಂದ್ರ ನಾಯಕ್, ಗ್ರಾಪಂ ಅಭಿವೃದ್ಧಿ ಅಧಿಕಾರಿ ಡಿ.ಟಿ. ಕೃಷ್ಣಮೂರ್ತಿ, ಕಾರ್ಯದರ್ಶಿ ಶ್ರೀಮತಿ ವಿಜಯಲಕ್ಷ್ಮಿ ಮತ್ತು ಇತರರು ಭಾಗವಹಿಸಿದ್ದರು.