ಮಲೇಬೆನ್ನೂರು, ಸೆ. 4- ಬೆಳಲಗೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಜಿ.ಎಲ್. ಬಸವರಾಜ್ ಅವರು ಸೋಮವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಹಕಾರಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಭಾರತಿ ಅವರು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.
ಕೆ.ಕೆ. ರಾಜಪ್ಪ ಅವರ ರಾಜೀನಾಮೆಯಿಂದಾಗಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಡಿಸಿಸಿ ಬ್ಯಾಂಕ್ ನಿರ್ದೇಶಕ ಜಿ ಎನ್ ಸ್ವಾಮಿ, ಸಂಘದ ಉಪಾಧ್ಯಕ್ಷ ಆಂಜನೇಯ, ಡಿಸಿಸಿ ಬ್ಯಾಂಕಿನ ಮೇಲ್ವಿಚಾರಕ ಚೇತನ್, ಸಂಘದ ಕಾರ್ಯದರ್ಶಿ ಹೆಚ್.ಎಂ. ನಾಗರಾಜ್ ಹಾಗೂ ಸಂಘದ ನಿರ್ದೇಶಕರು ಮತ್ತು ಗ್ರಾಮಸ್ಥರು ಈ ವೇಳೆ ಹಾಜರಿದ್ದು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.