ದೇಶದ ಅಭಿವೃದ್ದಿಯಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯ

ದೇಶದ ಅಭಿವೃದ್ದಿಯಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯ

ಹರಪನಹಳ್ಳಿ ತಾಲ್ಲೂಕಿನ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕರಾದ ಲತಾ ಮಲ್ಲಿಕಾರ್ಜುನ್

ಹರಪನಹಳ್ಳಿ, ಸೆ. 5- ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯವಾಗಿದೆ ಎಂದು ಶಾಸಕರಾದ ಎಂ.ಪಿ. ಲತಾ ಮಲ್ಲಿಕಾರ್ಜುನ್ ಹೇಳಿದರು.

ಪಟ್ಟಣದ ತರಳಬಾಳು ಸಮುದಾಯ ಭವನದಲ್ಲಿ ಶಿಕ್ಷಕರ ಸಂಘ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹಿಂದಿನಿಂದಲೂ ಗುರುಗಳಿಗೆ ಉನ್ನತ ಸ್ಥಾನ ಕೊಡಲಾಗಿದೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದೀರಿ. ಶ್ರದ್ಧೆಯಿಂದ ಬೋಧನೆ ಮಾಡಿ ಪಠ್ಯದ ಜೊತೆಗೆ ಪ್ರಾಪಂಚಿಕ ಜ್ಞಾನ ಹಾಗೂ ಮೌಲ್ಯಗಳನ್ನು ಮಕ್ಕಳಿಗೆ ಕಲಿಸಿ, ಶಿಕ್ಷಕರ ದಿನಾಚರಣೆ ಸಮಾಜದಲ್ಲಿ ಅವರು ವಹಿಸುವ ಪಾತ್ರವನ್ನು ಗುರುತಿಸು ವತ್ತ ಮಹತ್ವದ ಹೆಜ್ಜೆಯಾಗಿದೆ ಎಂದ ಅವರು, ನೀವು ನೀಡಿದ ಮನವಿಯನ್ನು ಸರ್ಕಾರದ ಗಮನಕ್ಕೆ ತರುತ್ತೇನೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಯು. ಬಸವರಾಜಪ್ಪ ಮಾತನಾಡಿ, ತಾಲ್ಲೂಕಿನಲ್ಲಿ 958 ಶಿಕ್ಷಕರು, 245 ಅತಿಥಿ ಶಿಕ್ಷಕಕರು ಸೇರಿದಂತೆ 51850 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಶೈಕ್ಷಣಿಕವಾಗಿ ಸಾಕಷ್ಟು ಅಭಿವೃದ್ಧಿ ಆಗಿದೆ. ಈ ಬಾರಿ ಕೂಡ ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಫಲಿತಾಂಶಕ್ಕೆ ವಿಶೇಷ ಕಾರ್ಯ ಯೋಜನೆ ರೂಪಿಸಲಾಗಿದ್ದು, ಗುಣಮಟ್ಟದ ಶಿಕ್ಷಣ ನೀಡಲು ಕ್ರಮ ವಹಿಸಿದ್ದೇವೆ. ಪೋಷಕರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಿ ಎಂದು ಶಿಕ್ಷಕರಿಗೆ ತಿಳಿಸಿದರು.

ಪುರಸಭೆ ಮುಖ್ಯಾಧಿಕಾರಿ ಎರಗುಡಿ ಶಿವಕುಮಾರ್ ಮಾತನಾಡಿ, ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಸವಿನೆನಪಿಗಾಗಿ ಶಿಕ್ಷಕರ ದಿನಾಚರಣೆ ಆಚರಿಸಲಾಗುತ್ತಿದ್ದು, ಹರಪನಹಳ್ಳಿ ಶಿಕ್ಷಣ ಕಾಶಿಯಾಗಿದೆ. ಶಿಕ್ಷಕರು ಜನರಿಗೆ ಮಾರ್ಗದರ್ಶಿ ಮತ್ತು ಸ್ಪೂರ್ತಿಯಾಗಿ ಕಾರ್ಯ ನಿರ್ವಹಿಸುವ ವ್ಯಕ್ತಿಯಾಗಿ ಕೆಲಸ ಮಾಡುತ್ತಾರೆ ಎಂದರು.

ಉಪ ವಿಭಾಗಾಧಿಕಾರಿ ಟಿ.ವಿ. ಪ್ರಕಾಶ್ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

 ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾದ ಹೆಚ್. ವಿಶಾಲಾಕ್ಷಮ್ಮ, ಇ.ಓ. ಕೆ.ಆರ್. ಪ್ರಕಾಶ್, ತಾಲ್ಲೂಕು  ದೈಹಿಕ ಶಿಕ್ಷಣ ಪರಿವೀಕ್ಷಕ ಕೆ. ಷಣ್ಮುಖಪ್ಪ, ಬಿಆರ್‌ಸಿ ಹೊನ್ನತ್ತೆಪ್ಪ, ಇಸಿಓ ಗಿರಜ್ಜಿ ಮಂಜುನಾಥ, ಅಕ್ಷರ ದಾಸೋಹದ ಎ.ಡಿ. ಜಯರಾಜ್, ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷೆ ಜಿ. ಪದ್ಮಲತಾ, ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎನ್.ಜಿ. ಮನೋಹರ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಎಸ್. ರಾಮಪ್ಪ, ಕಾರ್ಯದರ್ಶಿ ವೆಂಕಟೇಶ ಬಾಗಲಾರ್, ಸರ್ಕಾರಿ ನೌಕರರ ಒಕ್ಕೂಟದ ತಾಲ್ಲೂಕು ಅಧ್ಯಕ್ಷ ಎಂ. ಆಂಜನೇಯ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಕೆ. ಶಿವಾನಂದಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಸಹ ಕಾರ್ಯದರ್ಶಿ ಪಿ. ಗಣೇಶ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಕ್ಬೂಲ್ ಭಾಷಾ, ಎಂ.ಹೆಚ್. ಜನಾರ್ಧನ ರೆಡ್ಡಿ, ಶಿಕ್ಷಣಾಧಿಕಾರಿಗಳ ಸಂಘದ ತಾಲ್ಲೂಕು ಅಧ್ಯಕ್ಷ ಹೆಚ್.ಕೆ. ಚಂದ್ರಪ್ಪ, ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಕೆ. ತಿರುಪತಿ, ಅರ್ಜುನ ಪರಸಪ್ಪ, ಸೊಪ್ಪಿನ ಹನುಮಂತಪ್ಪ, ಟಿ. ಹೊನ್ನಪ್ಪ, ಎಎಸ್ಎಂ ಗುರುಪ್ರಸಾದ್, ಪದ್ಮರಾಜ, ಮಂಜುನಾಥ ಪೂಜಾರ್, ಬಿ. ಕೊಟ್ರೇಶ, ಲತಾ ರಾಥೋಡ್ ಹಾಗು ಇತರರು ಪಾಲ್ಗೊಂಡಿದ್ದರು.

error: Content is protected !!