ಹರಿಹರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಹರಿಹರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಹರಿಹರ, ಸೆ. 10 – ಚುನಾವಣೆಯ ಸಮಯದಲ್ಲಿ ರೈತರಿಗೆ ಕೊಟ್ಟಿರುವ ಭರವಸೆಯನ್ನು ಈಡೇರಿಸಿಲ್ಲ. ರಾಜ್ಯ ಸರ್ಕಾರ ದುರಾಡಳಿತ ನಡೆಸಿದೆ ಎಂದು ಆರೋಪಿಸಿ ಬಿಜೆಪಿ ಪ್ರತಿಭಟಿಸಿದೆ.

ಈ ವೇಳೆ ಮಾತನಾಡಿದ ಶಾಸಕ ಬಿ.ಪಿ.ಹರೀಶ್, ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಕೆಲಸಗಳನ್ನು ಮಾಡದೇ ಕೇವಲ ಗ್ಯಾರಂಟಿ ಹೆಸರನ್ನು ಹೇಳಿಕೊಂಡು ನೂರು ದಿನಗಳನ್ನು ಪೂರೈಸಿದೆ. ಚುನಾವಣೆ ಸಮಯದಲ್ಲಿ ರೈತರಿಗೆ ಕೊಟ್ಟಿರುವ ಆಶ್ವಾಸನೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿದರು.

ರೈತರಿಗೆ ಸಮರ್ಪಕ ವಿದ್ಯುತ್ ಪೂರೈಸದೇ ಸಂಕಷ್ಟಕ್ಕೆ ದೂಡಿದೆ. ರೈತರಿಗೆ ನೀಡಲಾಗುತ್ತಿದ್ದ 4 ಸಾವಿರ ರೂ.ಗಳ ಪ್ರೋತ್ಸಾಹ ಧನ ನಿಲ್ಲಿಸಿದೆ. ಸಾರ್ವಜನಿಕರು ಸಮಸ್ಯೆಗಳಲ್ಲಿ ದಿನ ಕಳೆಯುವಂತೆ ಮಾಡಿದ್ದು, ಅಭಿವೃದ್ಧಿ ಶೂನ್ಯವಾಗಿದೆ ಎಂದರು.

ಪ್ರತಿಭಟನೆಯ ನಂತರ ತಹಶೀಲ್ದಾರ್ ಪೃಥ್ವಿ ಸಾನಿಕಂ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಹನುಮಂತಪ್ಪ, ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ಹಿಂಡಸಘಟ್ಟು ಲಿಂಗರಾಜ್, ತಾಪಂ ಮಾಜಿ ಅಧ್ಯಕ್ಷ ಅಣ್ಣಪ್ಪ ಐರಣಿ,  ಮುಖಂಡರಾದ ರಾಜು ರೋಖಡೆ, ಬಾತಿ ಚಂದ್ರಪ್ಪ, ಕೆಂಚನಹಳ್ಳಿ ಮಹಾಂತೇಶಪ್ಪ, ಸುನಿಲ್, ರವಿರಾಯ್ಕರ್, ಕುಮಾರ್ ಧೂಳೆಹೊಳೆ, ರಾಚಪ್ಪ, ಗುರು ಮತ್ತಿತರರಿದ್ದರು.

error: Content is protected !!