ಸಿರಿಗೆರೆ ಶಿವಕುಮಾರ ಶ್ರೀ ಶ್ರದ್ಧಾಂಜಲಿ ಕಾರ್ಯಕ್ರಮ

ಸಿರಿಗೆರೆ ಶಿವಕುಮಾರ ಶ್ರೀ ಶ್ರದ್ಧಾಂಜಲಿ ಕಾರ್ಯಕ್ರಮ

ಬೆಳ್ಳೂಡಿಯಲ್ಲಿ ನಾಡಿದ್ದು ಭಕ್ತಿ ಸಮರ್ಪಣೆ

ಹರಿಹರ, ಸೆ. 13 – ಇದೇ ದಿನಾಂಕ 24 ರಂದು ಸಿರಿಗೆರೆ ಗ್ರಾಮದಲ್ಲಿ ನಡೆಯಲಿರುವ ತರಳಬಾಳು ಲಿಂಗೈಕ್ಯ ಜಗದ್ಗುರುಗಳಾದ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳ 31ನೇ ಶ್ರದ್ಧಾಂಜಲಿ ಸಮಾರಂಭದ ದಾಸೋಹಕ್ಕೆ ಹರಿಹರ ತಾಲ್ಲೂಕಿನಿಂದ ಭಕ್ತಿ ಸಮರ್ಪಣೆ ಕಾರ್ಯಕ್ರಮ ಬೆಳ್ಳೂಡಿ ಗ್ರಾಮದಲ್ಲಿ ನಾಡಿದ್ದು ದಿನಾಂಕ 16 ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ತರಳಬಾಳು ಜಗದ್ಗುರು ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ನಡೆಯಲಿದೆ ಎಂದು ತಾಲ್ಲೂಕು ಸಾಧು ವೀರಶೈವ ಸಮಾಜದ ಪ್ರಧಾನ ಕಾರ್ಯದರ್ಶಿ ಇಟಗಿ ಶಿವಣ್ಣ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಸಮಾರಂಭವು ಬೆಳ್ಳೂಡಿಯ ಪಾಟೀಲ್ ಗುರುಬಸಪ್ಪ ಪ್ರೌಢಶಾಲಾ ಆವರಣದಲ್ಲಿ ನಡೆಯಲಿದೆ. ಇದಕ್ಕೂ ಮುನ್ನ ಬೆಳ್ಳೂಡಿ ಕ್ರಾಸ್‌ನಿಂದ ಶ್ರೀಗಳನ್ನು ಬೈಕ್ ರಾಲಿ ಮೂಲಕ ಕರೆ ತರಲಾಗುವುದು ಎಂದವರು ಹೇಳಿದರು.

ಪಂಚಮಸಾಲಿ ಗುರುಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ, ಶ್ರೀ ವಿನಯ ಗುರೂಜಿ ಸಾನ್ನಿಧ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಶಾಸಕ ಬಿ.ಪಿ. ಹರೀಶ್, ಸಂಸದ ಜಿ.ಎಂ. ಸಿದ್ದೇಶ್ವರ, ತರಳಬಾಳು ಕೃಷಿ ಕೇಂದ್ರದ ಡಾ. ಡಿ.ಎನ್. ದೇವರಾಜ್, ತಾಲ್ಲೂಕು ಸಾಧು ವೀರಶೈವ ಸಮಾಜದ ಅಧ್ಯಕ್ಷ ಗೌಡ್ರು ಮಹಾದೇವಪ್ಪ ಅಮರಾವತಿ ಮತ್ತಿತರರು ಭಾಗವಹಿಸಲಿದ್ದಾರೆ.

ಬೆಳಿಗ್ಗೆ 10 ಗಂಟೆಯಿಂದ ಸಂಜೆಯವರೆಗೆ ರಕ್ತದಾನ ಶಿಬಿರ, ಉಚಿತ ಆರೋಗ್ಯ ತಪಾಸಣೆ, ನೇತ್ರ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿದೆ.

ಹಲವು ವರ್ಷಗಳಿಂದ ಒಂದು ನೂರ ಒಂದು ಕ್ವಿಂಟಾಲ್ ಅಕ್ಕಿ ಸಮರ್ಪಣೆ ಮಾಡುತ್ತಾ ಬರಲಾಗಿತ್ತು. 

ಆದರೆ, ಈ ಬಾರಿ ಮಠದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ 5 ಲಕ್ಷ ರೂಪಾಯಿ ದೇಣಿಗೆಯಾಗಿ ಮಠಕ್ಕೆ ಸಮ ರ್ಪಣೆ ಮಾಡಲಾಗುತ್ತದೆ ಎಂದು ಹೇಳಿದರು. 

ಈ ಸಂದರ್ಭದಲ್ಲಿ ಸಾಧು ವೀರಶೈವ ಸಮಾಜದ ಉಪಾಧ್ಯಕ್ಷ ಹಲಸಬಾಳು ಎಂ. ಶಿವಾನಂದಪ್ಪ, ಸಹ ಕಾರ್ಯದರ್ಶಿ ಕೆ.ಬಿ. ರುದ್ರೇಶ್ ಬೆಳ್ಳೂಡಿ, ಪಾಟೀಲ್ ಗುರುಬಸಪ್ಪ ಪ್ರೌಢಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಜಿ. ಹನು ಮಂತಪ್ಪ ಗೌಡ್ರು ಮತ್ತಿತರರು ಉಪಸ್ಥಿತರಿದ್ದರು.

error: Content is protected !!