ಶರಣ ಸಂಸ್ಕೃತಿ ಉತ್ಸವಕ್ಕೆ ಗೌರವಾಧ್ಯಕ್ಷರಾಗಿ ಅಥಣಿ ಗಚ್ಚಿನ ಮಠದ ಶ್ರೀ ಶಿವಬಸವ ಸ್ವಾಮೀಜಿ

ಶರಣ ಸಂಸ್ಕೃತಿ ಉತ್ಸವಕ್ಕೆ ಗೌರವಾಧ್ಯಕ್ಷರಾಗಿ ಅಥಣಿ ಗಚ್ಚಿನ ಮಠದ ಶ್ರೀ ಶಿವಬಸವ ಸ್ವಾಮೀಜಿ

ಚಿತ್ರದುರ್ಗ, ಸೆ. 13 – ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ನಡೆಯಲಿರುವ ಶರಣ ಸಂಸ್ಕೃತಿ ಉತ್ಸವ-2023ರ ಗೌರವಾಧ್ಯಕ್ಷರನ್ನಾಗಿ ಅಥಣಿಯ ಶ್ರೀ ಗಚ್ಚಿನ ಮಠದ ಶ್ರೀ ಶಿವಬಸವ ಸ್ವಾಮಿಗಳವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಆಡಳಿತಾಧಿಕಾರಿ ಶ್ರೀಮತಿ ಬಿ.ಎಸ್. ರೇಖಾ ಹಾಗೂ ಶ್ರೀ ಬಸವಪ್ರಭು ಸ್ವಾಮಿಗಳವರ ಅಧ್ಯಕ್ಷತೆಯಲ್ಲಿ ಶ್ರೀಮಠದಲ್ಲಿ ಬುಧವಾರ ನಡೆದ ಸಭೆಯಲ್ಲಿ ಈ ಬಾರಿಯ ಶರಣ ಸಂಸ್ಕೃತಿ ಉತ್ಸವವನ್ನು ಬರುವ ಅಕ್ಟೋಬರ್ 21 ರಿಂದ 25ರವರೆಗೆ  ನಡೆಸಲು ತೀರ್ಮಾನಿಸಲಾಯಿತು. ಕಾರ್ಯಕ್ರಮದ ವಿವರಗಳನ್ನು ಮುಂದಿನ ಸಭೆಯಲ್ಲಿ ಚರ್ಚಿಸಲು ಸಭೆ ತೀರ್ಮಾನಿಸಿತು.

ಸಭೆಯಲ್ಲಿ ಕಾರ್ಯನಿರ್ವಹಣಾಧಿಕಾರಿ ಎಂ.ಭರತ್‍ಕುಮಾರ್, ಬ್ಯಾಡಗಿ ವಿರಕ್ತಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು, ತಿಳುವಳ್ಳಿಯ ಶ್ರೀ ಬಸವ ನಿರಂಜನ ಸ್ವಾಮಿಗಳು, ಶ್ರೀಮಠದ ವ್ಯವಸ್ಥಾಪಕ ಆರ್. ಲಿಂಗರಾಜ್ ಇದ್ದರು. ಈ ಸಂದರ್ಭದಲ್ಲಿ ಗೌರವಾಧ್ಯಕ್ಷರಾಗಿ ಆಯ್ಕೆಯಾದ ಶ್ರೀಗಳನ್ನು ಸನ್ಮಾನಿಸಲಾಯಿತು.

error: Content is protected !!