ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಸರ್‌ ಎಂ. ವಿಶ್ವೇಶ್ವರಯ್ಯಗೆ ಅವಮಾನ

ಉಪ ನೋಂದಣಾಧಿಕಾರಿ ಕಚೇರಿಯಲ್ಲಿ  ಸರ್‌ ಎಂ. ವಿಶ್ವೇಶ್ವರಯ್ಯಗೆ ಅವಮಾನ

ದಾವಣಗೆರೆ, ಸೆ.15- ಸರ್.ಎಂ. ವಿಶ್ವೇಶ್ವರಯ್ಯ ನವರ ಜನ್ಮ ದಿನವಾದ ಇಂದು, ನಗರದ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಅವರ ಜನ್ಮ ದಿನ ಆಚರಿಸದೆ, ಕಡೇ ಪಕ್ಷ ಅವರ ಭಾವಚಿತ್ರಕ್ಕೆ ಹೂವಿನ ಹಾರವನ್ನೂ ಹಾಕದೆ ಅವಮಾನಿಸಲಾಗಿದೆ. ಅಧಿಕಾರಿಗಳ ಈ ನಿರ್ಲಕ್ಷ್ಯವನ್ನು ಖಂಡಿಸಿ ಇಂಜಿನಿಯರ್ಸ್ ಅಸೋಸಿಯೇಷನ್ನಿನ ಮಾಜಿ ಅಧ್ಯಕ್ಷ ಹೆಚ್.ವಿ. ಮಂಜುನಾಥ ಸ್ವಾಮಿ  ಮತ್ತು ಇತರರು ಉಪನೋಂದಣಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಂತರ ಅಧಿಕಾರಿಗಳು ಸರ್.ಎಂ.ವಿ. ಅವರ ಜನ್ಮ ದಿನವನ್ನು ಆಚರಿಸಿದ್ದಾರೆ. ಕನ್ನಡ ನಾಡಿನ ಕೀರ್ತಿ ಪತಾಕೆಯನ್ನು ವಿಶ್ವ ಮಟ್ಟದಲ್ಲಿ ಎತ್ತಿ ಹಿಡಿದ ಮಹಾನ್ ಮೇಧಾವಿ, ತಂತ್ರಜ್ಞ ಸರ್.ಎಂ. ವಿಶ್ವೇಶ್ವರಯ್ಯನವರು ಭಾರತದ ಗಣ್ಯ ಅಭಿಯಂತರರಲ್ಲಿ ಒಬ್ಬರು. ಅವರು ಹುಟ್ಟಿದ ದಿನವನ್ನು ದೇಶದಾದ್ಯಂತ ಅಭಿಯಂತರ ದಿನ ಎಂದು ಆಚರಿಸಲಾಗುತ್ತಿದೆ.

ಆದರೆ ರಾಜ್ಯದ ಬೊಕ್ಕಸಕ್ಕೆ ಅತಿ ಹೆಚ್ಚು ಆದಾಯ ತಂದುಕೊಡುವ ನೋಂದಣಾಧಿಕಾರಿ ಕಚೇರಿಯಲ್ಲಿಯೇ ಅವರನ್ನು ಕಡೆಗಣಿಸಿದ್ದಕ್ಕೆ ಮಂಜುನಾಥ ಸ್ವಾಮಿ ಮತ್ತು ಇತರರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

error: Content is protected !!