ದಾವಣಗೆರೆ, ಅ.1- ನಗರದ ಟಿವಿ ಸ್ಟೇಷನ್ ಕೆರೆ ಆವರಣದಲ್ಲಿ ಮಹಾನಗರ ಪಾಲಿಕೆ ವತಿಯಿಂದ ಇಂದು ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ಮಹಾನಗರ ಪಾಲಿಕೆ ಆಯುಕ್ತರಾದ ಶ್ರೀಮತಿ ರೇಣುಕಾ, ಪಾಲಿಕೆ ಸದಸ್ಯ ಕೆ.ಎಂ. ವೀರೇಶ್ ಸೇರಿದಂತೆ ಪಾಲಿಕೆ ಅಧಿಕಾರಿಗಳು, ಸಿಬ್ಬಂದಿಗಳು, ರೆಡ್ ಕ್ರಾಸ್ ಮತ್ತು ರೋಟರಿ ಕ್ಲಬ್ ಪದಾಧಿಕಾರಿಗಳು, ಸಾರ್ವಜನಿಕರು ಮತ್ತು ಸಂಘ – ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಪಾಲಿಕೆಯಿಂದ ಸ್ವಚ್ಛತಾ ಕಾರ್ಯಕ್ರಮ
