ಹಿರಿಯ ನಾಗರಿಕರ ಬೇಡಿಕೆ ಈಡೇರಿಸುವಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರಿ ಮನವಿ

ಹಿರಿಯ ನಾಗರಿಕರ ಬೇಡಿಕೆ ಈಡೇರಿಸುವಂತೆ  ಸಚಿವೆ ಲಕ್ಷ್ಮಿ  ಹೆಬ್ಬಾಳ್ಕರ್‌ ಅವರಿ ಮನವಿ

ದಾವಣಗೆರೆ, ಸೆ.30- ಎಲ್ಲಾ ಜಿಲ್ಲೆಗಳಲ್ಲಿ ಹಿರಿಯ ನಾಗರಿಕರ ಭವನಕ್ಕೆ ಜಾಗ ಮೀಸಲಿಡು ವುದು ಸೇರಿದಂತೆ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಹಿರಿಯ ನಾಗರಿಕರ ಸಂಘದಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿ ಜಿಲ್ಲೆಯಲ್ಲಿ ಹಿರಿಯ ನಾಗರಿಕರ ಭವನಕ್ಕೆ ಜಾಗ ಮೀಸಲಿಡುವುದು, ಹಿರಿಯ ನಾಗರಿಕರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಜಿ.ಪಂ., ತಾ.ಪಂ., ಗ್ರಾ.ಪಂ. ಕಚೇರಿಗಳಲ್ಲಿ ಫಲಕ ಪ್ರದರ್ಶಿಸುವುದು, ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ ಸ್ಥಾಪಿಸುವುದು.

ಉಚಿತ ವೈದ್ಯಕೀಯ ಚಿಕಿತ್ಸೆ ನೀಡುವುದು, ಬಸ್ ನಿಲ್ದಾಣಗಳಲ್ಲಿ ವಿಶ್ರಾಂತಿ ಕೊಟಡಿ ನಿರ್ಮಾಣ, ಶೇ.3ರಷ್ಟು ಮೀಸಲಾತಿ ನೀಡುವುದು, ಪಿಂಚಣಿಯನ್ನು ಕನಿಷ್ಟ 3 ಸಾವಿರ ರೂ.ಗೆ ಹೆಚ್ಚಿಸುವುದು, ವಿಶೇಷವಾದ ಹಿರಿಯ ನಾಗರಿಕರ ನ್ಯಾಯಾಲಯಗಳನ್ನು ಸ್ಥಾಪಿಸಲು ಸೂಕ್ತ ಕ್ರಮ ಕೈಗೊಳ್ಳುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಸಚಿವರಿಗೆ ಮನವಿ ಸಲ್ಲಿಸಲಾಗಿದೆ. 

ಈ ಸಂದರ್ಭದಲ್ಲಿ ಸಂಘದ ಬೆಳಗಾವಿ ಅಧ್ಯಕ್ಷರೊಟ್ಟಿಗೆ, ದಾವಣಗೆರೆ ಜಿಲ್ಲಾಧ್ಯಕ್ಷ ಎಸ್.ಟಿ. ಕುಸುಮ ಶ್ರೇಷ್ಠಿ ಹಾಗು ಇತರರು ಇದ್ದರು.

error: Content is protected !!