ಪೌರ ಕಾರ್ಮಿಕರು ಆರೋಗ್ಯ ಕಾಪಾಡಿಕೊಳ್ಳಬೇಕು

ಪೌರ ಕಾರ್ಮಿಕರು ಆರೋಗ್ಯ ಕಾಪಾಡಿಕೊಳ್ಳಬೇಕು

ಜಗಳೂರು ತಹಶೀಲ್ದಾರ್ ಅರುಣ್ ಕಾರಗಿ ಕರೆ

ಜಗಳೂರು, ಅ.2- ಪೌರ ಕಾರ್ಮಿಕರು ವೈಯಕ್ತಿಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಪಟ್ಟಣ ಪಂಚಾಯಿತಿ ಆಡಳಿತಾಧಿಕಾರಿ ಅರುಣ್  ಕಾರಗಿ ಸಲಹೆ ನೀಡಿದರು.

ಪಟ್ಟಣದ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ  ಆಯೋಜಿಸಿದ್ದ 12 ನೇ ವರ್ಷದ ಪೌರ ಕಾರ್ಮಿಕ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಪಟ್ಟಣದ ಸೌಂದರ್ಯ ಹೆಚ್ಚಿಸುವ ಪೌರಕಾರ್ಮಿಕರ ಸೇವೆ ಶ್ಲ್ಯಾಘನೀಯ.ಅವರನ್ನು ಗೌರವ ಮನೋಭಾವದಿಂದ ಕಾಣಬೇಕು. ಅತಿಯಾದ ಕೆಲಸದ ಒತ್ತಡದಿಂದ ದುಶ್ಚಟಗಳಿಗೆ ಬಲಿಯಾಗಬಾರದು. ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಿ ಸುಸಂಸ್ಕೃತರನ್ನಾಗಿಸಬೇಕು ಎಂದು ಕಿವಿಮಾತು ಹೇಳಿದರು.

ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ತಿಪ್ಪೇಸ್ವಾಮಿ ಮಾತನಾಡಿ, ಪಟ್ಟಣದ ಸ್ವಚ್ಛತೆಗೆ ಪೌರ ಕಾರ್ಮಿಕರನ್ನೇ ಅವಲಂಬಿತರಾಗದೆ, ಸಾರ್ವಜನಿಕರು ಜಾಗೃತರಾಗಬೇಕು. ಚರಂಡಿಗೆ ಕಸ ಎಸೆಯುವವರಿಗೆ ನೋಟೀಸ್ ಜಾರಿ ಮಾಡಬೇಕು. ಸ್ವಚ್ಛತೆಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಸಲಹೆ ನೀಡಿದರು.

ಪ.ಪಂ‌ ಸದಸ್ಯ ರಮೇಶ್ ರೆಡ್ಡಿ ಮಾತನಾಡಿ, ಪೌರ ಕಾರ್ಮಿಕರಿಗೆ ಪಟ್ಟಣದಲ್ಲಿ ಸರ್ಕಾರಿ ಜಾಗವನ್ನು ಗುರುತಿಸಿ, ನಿವೇಶನ ಮತ್ತು ಸೂರು ಕಲ್ಪಿಸಬೇಕು ಎಂದು ಹೇಳಿದರು. 

ಹಿರಿಯ ನಾಗರಿ ಕರ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ತಿಪ್ಪೇಸ್ವಾಮಿ, ಪ.ಪಂ.ಮಾಜಿ ಉಪಾಧ್ಯಕ್ಷೆ ಮಂಜಮ್ಮ, ಮುಖ್ಯಾಧಿಕಾರಿ ಲೋಕ್ಯಾನಾಯ್ಕ ಮಾತನಾಡಿದರು.

ಪೌರ ಕಾರ್ಮಿಕರಿಗೆ ಹಾಗೂ ಸ್ವಯಂ ಸೇವಕರಿಗೆ ಸನ್ಮಾನಿಸಿ, ಗೌರವಿಸಲಾಯಿತು.

ಕಾರ್ಯಕ್ರಮಕ್ಕೂ ಮುನ್ನ ಅಂಬೇಡ್ಕರ್ ವೃತ್ತದಲ್ಲಿ  ಮೆರವಣಿಗೆಗೆ ಶಾಸಕ ಬಿ. ದೇವೇಂದ್ರಪ್ಪ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಪ.ಪಂ.ಸದಸ್ಯರಾದ ಲಲಿತಮ್ಮ, ಲುಕ್ಮಾನ್ ಖಾನ್, ಶಕೀಲ್ ಅಹ್ಮದ್, ನವೀನ್ ಕುಮಾರ್, ರವಿಕುಮಾರ್, ಪಾಪಲಿಂಗಪ್ಪ, ದೇವರಾಜ್, ಮಂಜುನಾಥ್, ಮುಖಂಡರಾದ ಕುಬೇಂದ್ರಪ್ಪ, ರಮೇಶ್, ಓಬಳೇಶ್, ಇಂಜಿನಿಯರ್ ಶೃತಿ, ಆರೋಗ್ಯ ನಿರೀಕ್ಷಕ ಖಿಫಾಯತ್ ಮುಂತಾದವರು ಇದ್ದರು.

error: Content is protected !!