ಜಗಳೂರು ಶಾಸಕ ಬಿ. ದೇವೇಂದ್ರಪ್ಪ
ಜಗಳೂರು, ಅ.2- ಧರ್ಮಸ್ಥಳ ಸಂಸ್ಥೆಯ ಸಮಾಜ ಸೇವಾ ಕಾರ್ಯಕ್ರಮಗಳು ಶ್ಲ್ಯಾಘನೀ ಯ ಎಂದು ಶಾಸಕ ಬಿ.ದೇವೇಂದ್ರಪ್ಪ ತಿಳಿಸಿದರು.
ಪಟ್ಟಣದ ಪ್ರೇರಣ ಸಮಾಜ ಸೇವಾ ಸಂಸ್ಥೆಯ ಚರ್ಚ್ ಸಭಾಂಗಣದಲ್ಲಿ ಇಂದು ಉಚಿತ ಆರೋಗ್ಯ ತಪಾಸಣೆ ಮತ್ತು ಪ್ರಕೃತಿ ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಒತ್ತಡದ ಜೀವನದಲ್ಲಿ ನೆಮ್ಮದಿಯ ಬದುಕಿಗೆ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಅತಿ ಅವಶ್ಯಕವಾಗಿವೆ. ಇದರ ಬಗ್ಗೆ ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವುದು ಅವಶ್ಯಕವಾಗಿದೆ ಎಂದರು.
ಪ್ರೇರಣ ಸಮಾಜ ಸೇವಾ ಸಂಸ್ಥೆ, ಸರ್ಕಾರಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರ, ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಕಾಲೇಜು ಹಾಗೂ ಆಸ್ಪತ್ರೆಗಳು ಉಜಿರೆ ಮತ್ತು ಕಾರ್ಮೆಲ್ ಜ್ಯೋತಿ ಚಾರಿಟಬಲ್ ಟ್ರಸ್ಟ್ ಇವರ ಸಹಯೋಗ ದೊಂದಿಗೆ ಶಿಬಿರ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಕೆಪಿಸಿಸಿ ಎಸ್.ಟಿ. ಘಟಕದ ರಾಜ್ಯಾಧ್ಯಕ್ಷ ಕೆ.ಪಿ.ಪಾಲಯ್ಯ, ಸರ್ಕಾರಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರದ ವೈದ್ಯಾಧಿಕಾರಿ ಡಾ. ಶ್ವೇತ ಎಸ್. ಬೆಳಗಲಿ, ಡಾ.ಸ್ವಾಮಿ, ಡಾ. ಸಂತೋಷ್, ತಾಲ್ಲೂಕು ಆಡಳಿತ ವೈದ್ಯಾಧಿಕಾರಿ ಡಾ. ಪಿ.ಆರ್. ವಿಶ್ವನಾಥ್, ಫಾ. ವಿಲಿಯಂ ಮಿರಾಂದ, ಫಾ. ರೊನಾಲ್ಡ್, ಪಿ.ಎಸ್. ಅರವಿಂದ್, ಸಂತೋಷ್, ಗಣೇಶ್, ಶಹೀನ ಬೇಗಂ, ಸತೀಶ್ ಮತ್ತಿತರರು ಇದ್ದರು.