ಅಣಬೂರು ಶ್ರೀ ಮಾರುತಿ ಗ್ರಾಮಾಂತರ ಪ್ರೌಢಶಾಲೆ ವಾಲಿಬಾಲ್‌ನಲ್ಲಿ ಪ್ರಥಮ

ಅಣಬೂರು ಶ್ರೀ ಮಾರುತಿ ಗ್ರಾಮಾಂತರ ಪ್ರೌಢಶಾಲೆ ವಾಲಿಬಾಲ್‌ನಲ್ಲಿ ಪ್ರಥಮ

ಜಗಳೂರು, ಅ. 6- ತಾಲ್ಲೂಕಿನ ಅಣಬೂರು ಗ್ರಾಮದ ಶ್ರೀ ಮಾರುತಿ ಗ್ರಾಮಾಂತರ ಪ್ರೌಢಶಾಲೆಯ ವಿದ್ಯಾರ್ಥಿಗಳು ವಲಯ, ತಾಲ್ಲೂಕು ಮಟ್ಟದ ವಾಲಿಬಾಲ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.

ಗ್ರಾಮೀಣ ಪ್ರದೇಶದ ಶಾಲೆಯ ವಿದ್ಯಾರ್ಥಿಗಳನ್ನು ವಿಕಾಸ್ ನಗರ ಗ್ರಾಮೀಣಾಭಿವೃದ್ಧಿ ಸ್ವಯಂ ಸೇವಾ ಸಂಸ್ಥೆ ಗುರುತಿಸಿ ವಿಜೇತ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಪ್ರೋತ್ಸಾಹಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಕೆ. ಮಹಾಲಕ್ಷ್ಮಿಮಾತನಾಡಿದರು.ಸಂಸ್ಥೆಯ ಸಂಪನ್ಮೂಲ ವ್ಯಕ್ತಿಗಳಾದ ರೇಖಾ, ಸಿದ್ದಲಿಂಗಪ್ಪ, ಗುರುರಾಜ್, ಶಾಲೆಯ ಮುಖ್ಯ ಶಿಕ್ಷಕರಾದ ಕುಮಾರ ನಾಯ್ಕ ಮತ್ತು ಸಿಬ್ಬಂದಿ ವರ್ಗದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

error: Content is protected !!