ಬರ: ವಾಸ್ತವ ವರದಿ ಸಲ್ಲಿಕೆ

ಬರ: ವಾಸ್ತವ ವರದಿ ಸಲ್ಲಿಕೆ

ಜಗಳೂರಲ್ಲಿ ಬರ ಅಧ್ಯಯನ ನಡೆಸಿದ ಕೇಂದ್ರದ ವಿ.ಅಶೋಕ್ ತಂಡ

ಜಗಳೂರು, ಅ.7- ಸರ್ಕಾರದ ಮಾರ್ಗಸೂಚಿ ಯನ್ವಯ ಜಿಲ್ಲೆಯ ಬರ ಪರಿಸ್ಥಿತಿಯ ವಾಸ್ತವ ಸ್ಥಿತಿಯ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಕೇಂದ್ರ ಬರ ಅಧ್ಯಯನದ ಮೂರನೇ ತಂಡದ ನೇತೃತ್ವ ವಹಿಸಿರುವ ಕೇಂದ್ರ ಜಲಶಕ್ತಿ ಆಯೋಗದ ನಿರ್ದೇಶಕ ವಿ.ಅಶೋಕ್ ಕುಮಾರ್ ಹೇಳಿದರು.

ತಾಲ್ಲೂಕಿನ ವಿವಿಧೆಡೆ ರೈತರ ಜಮೀನುಗಳಿಗೆ ಭೇಟಿ ನೀಡಿ, ಮಳೆ ಕೊರತೆಯಿಂದ ಉಂಟಾದ ಬೆಳೆ ಹಾನಿ ವೀಕ್ಷಣೆ ಮಾಡಿ ನಂತರ ಮಾಧ್ಯಮ ದರೊಂದಿಗೆ ಮಾತನಾಡಿದರು.

ಈಗಾಗಲೇ ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಬರ ಅಧ್ಯಯನ ಕಾರ್ಯ ಕೈಗೊಂಡು, ಶನಿವಾರ ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಯ ವಿವಿಧೆಡೆ ರೈತರ ಜಮೀನುಗಳಿಗೆ ಭೇಟಿ ನೀಡಿ, ಬರ ಪರಿಸ್ಥಿತಿಯ ಅಧ್ಯಯನ ಮಾಡಲಾಗುತ್ತಿದೆ. ಜಿಲ್ಲೆಯ ಬರ ಪರಿಸ್ಥಿತಿ ಕುರಿತು ರೈತರೊಂದಿಗೆ ಸಂವಾದ ನಡೆಸಿ, ಮಾಹಿತಿ ಪಡೆಯಲಾಗು ತ್ತಿದೆ. ಇದರ ಜೊತೆಗೆ ಜಿಲ್ಲಾಡಳಿತವೂ ಸಹ ಬರದ ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿದೆ ಎಂದು ತಿಳಿಸಿದರು.

ವಾಸ್ತವ ಸ್ಥಿತಿಯ ವರದಿಯನ್ನು ರಾಜ್ಯದ ಬರ ಅಧ್ಯಯನ ತಂಡದ ನೇತೃತ್ವ ವಹಿಸಿರುವ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿ ವಾಲಯದ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ಅವರಿಗೆ ಸಲ್ಲಿಸಲಾಗುವು ದು, ಬಳಿಕ ರಾಜ್ಯದ ಸಂಗ್ರಹಿತ, ಕ್ರೋಢೀಕೃತ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾ ಗುವುದು ಎಂದು ಅವರು ತಿಳಿಸಿದರು.

error: Content is protected !!