ರಾಷ್ಟೀಯ ಹಬ್ಬಗಳಿಗೆ ಗೈರು : ಅಧಿಕಾರಿಗಳಿಗೆ ನೋಟಿಸ್

ರಾಷ್ಟೀಯ ಹಬ್ಬಗಳಿಗೆ ಗೈರು : ಅಧಿಕಾರಿಗಳಿಗೆ  ನೋಟಿಸ್

ಹರಪನಹಳ್ಳಿ : ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ತಹಶೀಲ್ದಾರ್ ಗಿರೀಶ್‌ಬಾಬು

ಹರಪನಹಳ್ಳಿ, ಅ. 11- ರಾಷ್ಟ್ರೀಯ ಹಬ್ಬಗಳಿಗೆ ಗೈರು ಹಾಜರಾದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟೀಸ್ ನೀಡಲಾಗುವುದು ಎಂದು ತಹಶೀಲ್ದಾರ್ ಗಿರೀಶ್‌ಬಾಬು ಹೇಳಿದರು.

ಪಟ್ಟಣದ ಮಿನಿ ವಿಧಾನಸೌಧದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇದೇ ದಿನಾಂಕ 28ರಂದು ಜರುಗುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಪಟ್ಟಣದ ಸಮರ್ಥ ಸೌಧದಲ್ಲಿ ಕಾರ್ಯಕ್ರಮ ಆಯೋಜಿಸಲಾಗುವುದು. ಕಾರ್ಯಕ್ರಮಕ್ಕೆ ಸಂಘ-ಸಂಸ್ಥೆಯವರು ಹಾಗೂ ವಿವಿಧ ಸಮಾಜಗಳ ಮುಖಂಡರಿಗೆ ಆಹ್ವಾನ ನೀಡಿ ಎಂದು ಸೂಚನೆ ನೀಡಿದರು.

ತಾಲ್ಲೂಕು ವಾಲ್ಮೀಕಿ ನಾಯಕ ಸಮಾ ಜದ ಅಧ್ಯಕ್ಷ ಉಚ್ಚೆಂಗೆಪ್ಪ ಕೆ. ಮಾತನಾಡಿ, ಭಾರತೀಯ ಸಂಸ್ಕೃತಿಗೆ ಮಾನವೀಯ ಮೌಲ್ಯಗಳನ್ನು ಜಗತ್ತಿಗೇ ಸಾರಿದ ಆದಿಕವಿ, ದಾರ್ಶನಿಕ ಮಹರ್ಷಿ ವಾಲ್ಮೀಕಿ ಜಯಂತಿ ಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿ ಸಲು ಅಧಿಕಾರಿಗಳು, ಸಂಘ-ಸಂಸ್ಥೆಯವರು ಹಾಗೂ ವಿವಿಧ ಸಮಾಜದ ಮುಖಂಡರ ಸಹಕಾರ ಅಗತ್ಯವಾಗಿದ್ದು, ವಾಲ್ಮೀಕಿ ಜಯಂ ತಿಯ ವೇದಿಕೆ ಕಾರ್ಯಕ್ರಮಕ್ಕೆ ವಿವಿಧ ಸಮಾ ಜಗಳ ಮುಖಂಡರುಗಳನ್ನು ಆಹ್ವಾನಿಸುವ ಮೂಲಕ ವಾಲ್ಮೀಕಿಯವರ ಆದರ್ಶಗಳನ್ನು ತಿಳಿ ಹೇಳುವ ಮೂಲಕ ವಿವಿಧತೆಯಲ್ಲಿ ಏಕತೆ ಕಾಣುವಂತಹ ಕಾರ್ಯಕ್ರಮ ಮಾಡಬೇಕು ಎಂದು ಸಲಹೆ ನೀಡಿದರು.

ತಾಲ್ಲೂಕು ವಾಲ್ಮೀಕಿ ನಾಯಕ ಸಮಾಜದ ಮಾಜಿ ಅಧ್ಯಕ್ಷ ಹೆಚ್.ಟಿ. ಗಿರೀಶಪ್ಪ ಹಾಗೂ ಸಮಾಜದ ಕಾರ್ಯದರ್ಶಿ ಗಿರಜ್ಜಿ ನಾಗರಾಜ್ ಮಾತನಾಡಿ, ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆಗೆ ವಿವಿಧ ಇಲಾಖೆಗಳ ಅಧಿಕಾರಿಗಳ ಗೈರು ಎದ್ದು ಕಾಣುತ್ತಿದ್ದು, ಮಹನೀಯರ ಜಯಂತಿಯನ್ನು ಯಶಸ್ವಿಗೊಳಿಸಲು ಅಧಿಕಾರಿಗಳು, ಸಮಾಜದ ಮುಖಂಡರುಗಳು ಹೆಚ್ಚಿನ ಸಂಖ್ಯೆಯಲ್ಲಿ ಇರಬೇಕು ಹಾಗೂ ಗ್ರಾಮೀಣ ಪ್ರದೇಶದಿಂದ ಬರುವ ಸಮಾಜದ ಬಂಧುಗಳು ಜಾಸ್ತಿ ಇದ್ದು, ಈಗಿರುವ ಸಮಯದ ಬದಲು ಮಧ್ಯಾಹ್ನ 1 ಗಂಟೆಗೆ ಸಭೆ ಆಯೋಜಿಸಿದರೆ ಉತ್ತಮ ಎಂದರು.

ಅಂಬೇಡ್ಕರ್ ಸಂಘದ ಅಧ್ಯಕ್ಷ ನಿಚ್ಚವ್ವನಹಳ್ಳಿ ಭೀಮಪ್ಪ ಹಾಗೂ ಮಾದಿಗ ದಂಡೋರ ಸಮಿತಿಯ ಅಧ್ಯಕ್ಷ ಪುಣಬಗಟ್ಟಿ ನಿಂಗಪ್ಪ ಮಾತನಾಡಿ, ಶ್ರೀ ಮಹರ್ಷಿ ವಾಲ್ಮೀಕಿ ಒಂದು ಜಾತಿಗೆ ಸೀಮಿತವಾದವರಲ್ಲ. ಮಹನೀಯರ ಜಯಂತಿಗಳಿಗೆ ವಿವಿಧ ಸಮಾಜಗಳ ಮುಖಂಡರುಗಳನ್ನು ಸಭೆಗೆ ಆಹ್ವಾನಿಸಬೇಕು ಎಂದು ಸಲಹೆ ನೀಡಿದರು.

ಸಮಾಜ ಕಲ್ಯಾಣಾಧಿಕಾರಿ ರೇಣುಕಾದೇವಿ, ಪುರಸಭೆ ಮುಖ್ಯಾಧಿಕಾರಿ ಯರಗುಡಿ ಶಿವಕುಮಾರ, ತಾಲ್ಲೂಕು ವಾಲ್ಮೀಕಿ ನಾಯಕ ಮಹಿಳಾ ಘಟಕದ ಅಧ್ಯಕ್ಷರಾದ ಕಂಚಿಕೇರಿ ಜಯಲಕ್ಷ್ಮಿ, ನಿವೃತ್ತ ಮುಖ್ಯ ಶಿಕ್ಷಕ ಆನಂದಪ್ಪ, ಏಕಲವ್ಯ ಸಂಘರ್ಷ ಸಮಿತಿಯ ಅಧ್ಯಕ್ಷ ರಾಯದುರ್ಗದ ಪ್ರಕಾಶ, ಕಾರ್ಯದರ್ಶಿ ಶಿವರಾಜ, ಮುಖಂಡರಾದ ಮಂಡಕ್ಕಿ ಸುರೇಶ, ಮಾರುತಿ ಪೂಜಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

error: Content is protected !!