ಮಲೇಬೆನ್ನೂರು, ಅ.25- ಕೊಮಾರನಹಳ್ಳಿ ಗ್ರಾಮದ ಶ್ರೀ ಬೀರ ಲಿಂಗೇಶ್ವರ ಸ್ವಾಮಿಯ ದೊಡ್ಡ ಎಡೆ ಜಾತ್ರೆ ಅಂಗವಾಗಿ ಬುಧವಾರ ಸಂಜೆ ಗ್ರಾಮದಲ್ಲಿ ಶ್ರೀ ಬೀರಲಿಂಗೇಶ್ವರ ಸ್ವಾಮಿಯ ಮೆರವಣಿಗೆ ಜರುಗಿತು. ಕಾಂಗ್ರೆಸ್ ಮುಖಂಡ ನಂದಿಗಾವಿ ಶ್ರೀನಿವಾಸ್ ಅವರು ಟ್ರ್ಯಾಕ್ಟರ್ ಚಾಲನೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ತಾ.ಪಂ. ಮಾಜಿ ಅಧ್ಯಕ್ಷ ಎಸ್.ಜಿ.ಪರಮೇಶ್ವರಪ್ಪ ಸೇರಿದಂತೆ ಗ್ರಾಮಸ್ಥರು ಈ ವೇಳೆ ಹಾಜರಿದ್ದರು. ಗುರುವಾರ ಬೆಳಿಗ್ಗೆ 9 ಗಂಟೆ ಯಿಂದ ಶ್ರೀ ಬೀರಲಿಂಗೇಶ್ವರ ಸ್ವಾಮಿಯ ದೊಡ್ಡ ಎಡೆ ಜಾತ್ರೆ ಜರುಗಲಿದೆ.
December 5, 2024