ದಾವಣಗೆರೆ, ಅ. 29 – ದಾವಣಗೆರೆ ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಬಿ.ಎಸ್. ಚನ್ನಬಸಪ್ಪ ಪ್ರಥಮ ದರ್ಜೆ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕದ ಜಂಟಿ ಆಶ್ರಯದಲ್ಲಿ ಹಳೆಬಿಸಲೇರಿ ಗ್ರಾಮದಲ್ಲಿ ಏರ್ಪಾಡಾಗಿದ್ದ ವಿಶೇಷ ವಾರ್ಷಿಕ ಶಿಬಿರವನ್ನು ಕಾಲೇಜಿನ ಅಧ್ಯಕ್ಷ ಬಿ.ಸಿ. ಶಿವಕುಮಾರ್ ಉದ್ಘಾಟಿಸಿದರು.
ದಾವಣಗೆರೆ ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ಅಶೋಕ್ ವಿ. ಪಾಳ್ಯದ್, ಎಸ್.ಬಿ.ಸಿ. ಕಾಲೇಜಿನ ಪ್ರಾಂಶುಪಾಲ ಡಾ.ಕೆ ಷಣ್ಮುಖ ಮತ್ತಿತರರು ಉಪಸ್ಥಿತರಿದ್ದರು. ಅಧ್ಯಕ್ಷತೆಯನ್ನು ಪ್ರಾಂಶುಪಾಲ ಎಂ.ಸಿ. ಗುರು ವಹಿಸಿದ್ದರು.